ಉದ್ಯೋಗ ಖಾತ್ರಿಯಲ್ಲಿ ಜಿಲ್ಲೆ ಉತ್ತಮ ಸಾಧನೆ
ಗದಗ: ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯು ಉತ್ತಮ ಸಾಧನೆ ಮಾಡುತ್ತಿದ್ದು, 3ನೇ ಸ್ಥಾನದಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಶನಿವಾರ ರಾತ್ರಿ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇಲಾಖೆಯ ಮಹತ್ವಾಕಾಂಕ್ಷಿ ಗ್ರಾಮ ಸ್ವಚ್ಛತೆಯ 6 ಲಕ್ಷ ಶೌಚಾಲಯ ನಿರ್ಮಾಣ ಗುರಿಯ ಪೈಕಿ 2 ಲಕ್ಷ ಶೌಚಾಲಯಗಳು ನಿರ್ಮಾಣಗೊಂಡಿವೆ. ರಾಜ್ಯ ಸರ್ಕಾರವು ಚುನಾವಣೆ ಹಾಗೂ ಇತರೆ ಕಾರಣಗಳಿಂದಾಗಿ ಬಜೆಟ್ ಅವಧಿ ಮೊಟಕುಗೊಂಡು ಈಗ ಡಿಸೆಂಬರ್ದಿಂದ ಮಾರ್ಚ್ವರೆಗೆ ನಿಜವಾದ ಅಭಿವೃದ್ಧಿಗೆ ಸಮಯ ಸಿಕ್ಕಂತಾಗಿದೆ.
ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ನಡೆ ಹಾಗೂ ನಿಲುವುಗಳಿಗೆ ಖಚಿತತೆ ದೊರಕಿದೆ. ಜನರೂ ಉತ್ಸಾಹದಿಂದ ಅಧಿವೇಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಡಳಿತ ನಡೆಯವ ರೀತಿ ನೀತಿಗಳನ್ನು ಬಹಳ ಹತ್ತಿರದಿಂದ ಕಂಡಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ, ಕಬ್ಬು, ಕೃಷ್ಣಾ, ಸಮಸ್ಯಾತ್ಮಕ ಗ್ರಾಮಗಳ ಕುಡಿಯುವ ನೀರಿನ ಹೀಗೆ ಹತ್ತು ಹಲವಾರು ವಿಷಯಗಳ ಸಮಗ್ರ ಚರ್ಚೆ ನಡೆದಿದ್ದು, ಆಡಳಿತಾತ್ಮಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉತ್ತಮ ಬೆಳವಣಿಗೆ ಆಗಿದೆ ಎಂದು ಸಚಿವ ಪಾಟೀಲ ಅಭಿಪ್ರಾಯಪಟ್ಟರು.
ಹೆಡ್ಮಾಸ್ಟರ್ ಅಮಾನತು
ಮುಳಗುಂದ ಪಟ್ಟಣದ ಸಮಸ್ಯೆಗಳ ಕುರಿತಂತೆ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಪಾಟೀಲ, ಆರ್ಎಂಎಸ್ಎ (ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ) ಹೈಸ್ಕೂಲಿನ ಹೆಡ್ಮಾಸ್ಟರ್ ಎಸ್.ಸಿ. ಬಸರಿ ಅವರನ್ನು ದುರ್ನಡತೆಗಾಗಿ ತಕ್ಷಣದಿಂದಲೇ ಅಮಾನತು ಮಾಡಿ ಬದಲೀ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಆದೇಶಿಸಿರುವುದಾಗಿ ತಿಳಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಾಂಪೌಂಡ್ ಗೋಡೆ ನಿರ್ಮಾಣ, ಆಟದ ಮೈದಾನ ಮತ್ತು ಸೋಲಾರ್ ಹೀಟರ್ ಸೌಲಭ್ಯ ಒದಗಿಸಲು, ಸರ್ಕಾರಿ, ಉರ್ದು ಶಾಲೆಗೆ ಆಟದ ಮೈದಾನ ಒದಗಿಸಲು ಜಿಲ್ಲಾಡಳಿತದೊಡನೆ ಚರ್ಚಿಸಿ ಜಾಗೆ ಒದಗಿಸಲು, ಪುರಾತನ ಅಬ್ಬಿಗೇರಿ ಕೆರೆಯನ್ನು ಉತ್ತಮವಾಗಿ ಅಭಿವೃದ್ಧಿಪಡಿಸಲು ಹಾಗೂ ಫೆಬ್ರವರಿ ಅಂತ್ಯದೊಳಗೆ ಮುಳಗುಂದ ಪಟ್ಟಣಕ್ಕೆ ತುಂಗಭದ್ರಾ ನೀರು ಪೂರೈಕೆ ಆಗುವಂತೆ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

