ಗದಗ

ಗುಣಮಟ್ಟದ ಕಾಮಗಾರಿ ನಿರ್ವಹಿಸಿ: ದೊಡ್ಡಮನಿ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಡಿ. 8
ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸುವ ಮೂಲಕ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಗುತ್ತಿಗೆದಾರರಿಗೆ ಸಹಕರಿಸಬೇಕೆಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಭಾನುವಾರ ಮುಂಡರಗಿ-ಚಿಕ್ಕಹೆಸರೂರ, ಮುದಗಲ್-ಮುಂಡರಗಿ 2013-14ನೇ ಸಾಲಿನ 13ನೇ ಹಣಕಾಸು ಯೋಜನೆಯಡಿ  4 ಕಿ.ಮೀ ರಾಷ್ಟ್ರೀಯ ಹೆದ್ದಾರಿ ರಸ್ತೆ ಮರುಡಾಂಬರೀಕರಣ ಕಾರ್ಯಕ್ರಮಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರಕ್ಕೆ ಮುಂಡರಗಿ ತಾಲೂಕು ಹಾಗೂ ಶಿರಹಟ್ಟಿ ತಾಲೂಕು ಮತ್ತು ಲಕ್ಷ್ಮೇಶ್ವರ ಭಾಗದ ಗ್ರಾಮಗಳು ಒಳಪಡುತ್ತಿದ್ದು, ಎಲ್ಲ ಭಾಗಗಳಲ್ಲಿಯೂ ಅನೇಕ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಂಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಕಾಮಗಾರಿಗಳಿಗೆ ಒತ್ತು ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕರಬಸಪ್ಪ ಹಂಚಿನಾಳ, ಧ್ರುವಕುಮಾರ ಹೊಸಮನಿ, ಗುತ್ತಿಗೆದಾರ ಎ.ಕೆ. ಹಂಚಿನಾಳ, ಡಿ.ಡಿ. ಮೋರನಾಳ, ಸೊಲಬಣ್ಣ ಜೋಬಾಳಿ, ಪುರಸಭಾ ಸದಸ್ಯ ಲಿಂಗರಾಜಗೌಡ ಪಾಟೀಲ, ಅಬ್ದುಲ್ ಖುರೇಶಿ, ಪ್ರದೀಪ ಗುಡದಪ್ಪನವರ, ಲೋಕೋಪಯೋಗಿ ಇಲಾಖೆ ಅಧಿಕಾರಿ ವಿ.ಎಸ್. ಹುಬ್ಬಳಿಮಠ, ಶರಣಪ್ಪ ಕುಬಸದ ಸೇರಿದಂತ ಅನೇಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.