ಅಂಬೇಡ್ಕರ್ರಿಂದ ಸಾಮಾಜಿಕ ನ್ಯಾಯ: ಪಾಟೀಲ್
ಗದಗ: ದೇಶದಲ್ಲಿ ಶೋಷಿತ ವರ್ಗಕ್ಕೆ ಸ್ವಾಭಿಮಾನ ಮತ್ತು ಸಾಮಾಜಿಕ ನ್ಯಾಯ ಕಲ್ಪಿಸಿದ ಕೀರ್ತಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ, ಗದಗ ಎಪಿಎಂಸಿ ಅಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.
ಅವರು ಈಚೆಗೆ ನಗರಸಭೆಯ ಆವರಣದಲ್ಲಿ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ವತಿಯಿಂದ ಆಯೋಜಿಸಲಾಗಿದ್ದ ಡಾ. ಅಂಬೇಡ್ಕರ್ ಅವರ 57ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಡೆದ ಬೃಹತ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. ಶೋಷಿತರ ಧ್ವನಿಗಟ್ಟಿಗೊಳಿಸುವಲ್ಲಿ ಅಂಬೇಡ್ಕರ್ ಹಾಗೂ ನೆಲ್ಸನ್ ಮಂಡೇಲಾ ಸಾಕಷ್ಟು ಶ್ರಮಪಟ್ಟಿದ್ದು, ಅವರ ಶ್ರಮದ ಪರಿಣಾಮವೇ ಇಂದು ದೇಶದಲ್ಲಿ ಹಿಂದುಳಿದ ವರ್ಗದಲ್ಲಿ ಜಾಗೃತಿ ಮೂಡಿದ್ದು ಸರ್ಕಾರದ ಯೋಜನೆಗಳು, ಅಧಿಕಾರದ ಹಂಚಿಕಾ ವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಯಾಗಲು ಸಾಧ್ಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯ ವ್ಯವಸ್ಥೆ ಜಾರಿಗೆಗೆ ಹೆಚ್ಚಿನ ಒತ್ತು ನೀಡಿದ್ದು, ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ವಿಷಯಗಳ ಈಡೇರಿಕೆಗೆ ಆದ್ಯತೆ ನೀಡಿದೆ. ಎಲ್ಲ ಚುನಾಯಿತ ಪ್ರತಿನಿಧಿಗಳು ಪಾರದರ್ಶಕವಾಗಿ ಕಾರ್ಯ ನಿರ್ವಹಿಸಿ, ಸರ್ಕಾರದ ಯೋಜನೆಗಳನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಹಿಂದುಳಿದವರು ಮತ್ತು ಶೋಷಿತರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕಿದೆ ಎಂದರು. ಕೆಎಂಎಫ್ ನಿರ್ದೇಶಕ ಎಚ್.ಜಿ. ಹಿರೇಗೌಡ್ರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ. ಅರ್ಜುನ ಗೊಳಸಂಗಿ, ಎಸ್.ಎನ್. ಬಳ್ಳಾರಿ, ಸತೀಶ ಹೂಲಿ, ಪರಶುರಾಮ ಪೂಜಾರ, ವಿದ್ಯಾಧರ ದೊಡ್ಡಮನಿ ಮುಂತಾದವರು ಹಾಜರಿದ್ದರು. ಇದಕ್ಕೂ ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ಬೈಕ್ ರ್ಯಾಲಿ ಹಾಗೂ ರಕ್ತ ದಾನ ಶಿಬಿರವನ್ನು ನೆರವೇರಿಸಲಾಯಿತು.
--
ಶಿರಹಟ್ಟಿ ಅಭಿವೃದ್ಧಿಗೊಳಿಸಿ
ಗದಗ: ಜಿಲ್ಲೆಯ ಐತಿಹಾಸಿಕ ಶಿರಹಟ್ಟಿ ಪಟ್ಟಣವು ಪ್ರಮುಖ ಸ್ಥಾನವನ್ನು ಗಳಿಸಿಕೊಳ್ಳುವ ಮೂಲಕ ಶಿರಹಟ್ಟಿ ಕ್ಷೇತ್ರ ಶಾಸಕರನ್ನೂ ಹೊಂದಿರುವಂತಹ ಪಟ್ಟಣವಾಗಿದ್ದು, ಜತೆಗೆ 17 ವಾರ್ಡ್ಗಳ ಸದಸ್ಯರನ್ನೊಳಗೊಂಡಿದ್ದರೂ ಇಲ್ಲಿ ಮೂಲ ಸೌಕರ್ಯಗಳ ಸಮಸ್ಯೆಯಿಂದ ವ್ಯಾಪಾರಸ್ಥರಿಗೆ ಮತ್ತು ಉದ್ದಿಮೆದಾರರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಶಿರಹಟ್ಟಿ ಪಟ್ಟಣವನ್ನು ಅಭಿವೃದ್ಧಿ ಪಡಿಸಲು ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಗದಗ ಜಿಲ್ಲಾ ಚೇಂಬರ್ ಆಗ್ರಹಿಸಿದೆ. ಈ ಕುರಿತು ಪ್ರಕಟಣೆ ನೀಡಿ, ಶಿರಹಟ್ಟಿಯಲ್ಲಿ ಜನಸಂಖ್ಯೆ ಪ್ರಮಾಣ ಅಧಿಕವಾಗಿದ್ದು ಸಣ್ಣ ಮತ್ತು ಮಧ್ಯಮ ಅಭಿವೃದ್ಧಿಯ ಯೋಜನೆಗಳನ್ನೊಳಗೊಂಡ ಸರ್ಕಾರದ ಅನುದಾನ ಶಿರಹಟ್ಟಿ ಪಟ್ಟಣಕ್ಕೆ ಸರಿಯಾಗಿ ಬಳಕೆಯಾಗುವುದಿಲ್ಲ. ಇದಕ್ಕೆ ಮೂಲ ಕಾರಣವೆಂದರೆ, ಪಪಂ ಬಹು ದಿನಗಳಿಂದಲೂ ಕಿರಿಯ ಅಭಿಯಂತರರು ಮತ್ತು ಸಿಬ್ಬಂದಿ ಕೊರತೆ ಇರುವುದರಿಂದ ಆಡಳಿತಾತ್ಮಕ ಕಾರ್ಯಕ್ಕೆ ತುಂಬಾ ತೊಂದರೆಯಾಗಿದೆ. ಇದರಿಂದ ಶಾಶ್ವತ ಅಭಿಯಂತರರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ಸರ್ಕಾರದ ಅನುದಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಶಿರಹಟ್ಟಿ ಪಟ್ಟಣವನ್ನು ಗದಗ ಜಿಲ್ಲೆಯಲ್ಲಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸಬೇಕೆಂದು ಸಂಸ್ಥೆಯ ಅಧ್ಯಕ್ಷ ಎಲ್.ಸಿ. ಲಿಂಬಯ್ಯಸ್ವಾಮಿಮಠ, ಗೌರವ ಕಾರ್ಯದರ್ಶಿ ವೀರಣ್ಣ ಬೇವಿನಮರದ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

