ಮಾಹಿತಿ ಹಕ್ಕು: ಸಾರ್ವಜನಿಕರ ಅಸ್ತ್ರ
ಕನ್ನಡಪ್ರಭ ವಾರ್ತೆ, ಗದಗ, ಡಿ. 10
ಸರ್ಕಾರಿ ಕಚೇರಿಗಳಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸದೆ, ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ಬಣ್ಣ ಬಯಲು ಮಾಡಲು ಮತ್ತು ಇವರ ಭ್ರಷ್ಟಾಚಾರದ ಕುರಿತು ಸಂಪೂರ್ಣ ಮಾಹಿತಿ ಪಡೆಯಲು ಮಾಹಿತಿ ಹಕ್ಕು ಕಾಯ್ದೆ ಸಾರ್ವಜನಿಕರಿಗೆ ಅಸ್ತ್ರವಾಗಿ ಕೆಲಸ ಮಾಡುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶಯ್ಯ ಹೇಳಿದರು.
ಅವರು ಸೋಮವಾರ ನಗರದ ಸಂಘದ ಕಚೇರಿಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಸ್ಲಂ ಯುವ ಸಮಿತಿ ಹಾಗೂ ವಿವೇಕಾನಂದ ಸ್ಲಂ ಪ್ರದೇಶದ ಶಾಖಾ ಘಟಕದಿಂದ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಮತ್ತು ಸರ್ಕಾರಿ ಯೋಜನೆಗಳ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಘಟನೆಗಳು ಇಂತಹ ಮಾಹಿತಿ ಶಿಬಿರಗಳನ್ನು ಮೇಲಿಂದ ಮೇಲೆ ಆಯೋಜಿಸಿ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸಬೇಕು. ಅಂದಾಗ ಮಾತ್ರ ಭ್ರಷ್ಟಾಚಾರ ರಹಿತ ರಾಜ್ಯ ನಿರ್ಮಾಣ ಕನಸು ನನಸಾಗಬಹುದು ಎಂದರು.
ಉಪನ್ಯಾಸಕರಾಗಿ ಆಗಮಿಸಿದ್ದ ಸ್ಲಂ ಸಮಿತಿ ಕಾರ್ಯದರ್ಶಿ ಇಮ್ತಿಯಾಜ್ ಮಾನ್ವಿ ಮಾತನಾಡಿ, ದೇಶದಲ್ಲಿ ಅಕ್ಟೋಬರ್ 12, 2005 ರಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಸರ್ಕಾರಿ ಕಚೇರಿಗಳ ಕಾರ್ಯವೈಖರಿಯಲ್ಲಿ ಪರಿಣಾಮಕಾರಿಯಾಗಿ ಬದಲಾವಣೆ ಮಾಡಲು ಇದರ ತಿಳಿವಳಿಕೆ ಯುವ ಸಮುದಾಯಕ್ಕೆ ಅವಶ್ಯಕವಾಗಿ ಬೇಕಾಗಿದೆ. ತಮ್ಮ ಪ್ರದೇಶಗಳ ಕಾಮಗಾರಿ ಕುರಿತು ಮಹಿತಿ ಪಡೆಯಬೇಕಾದರೆ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಮಾಹಿತಿ ಪಡೆದು ಕಾಮಗಾರಿ ಕುರಿತು ಪರಿಶೀಲಿಸಿ, ಏನಾದರೂ ಅವ್ಯವಹಾರ ನಡೆದಿರುವುದು ಕಂಡು ಬಂದರೆ ತಕ್ಷಣ ಸಾರ್ವಜನಿಕರ ಗಮನಕ್ಕೆ ತಂದು ಸರಿಪಡಿಸಲು ಈ ಕಾಯ್ದೆ ಸಹಕಾರಿಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಸ್ಲಂ ಮಹಿಳಾ ಸಮಿತಿ ಅಧ್ಯಕ್ಷ ಉಮಾದೇವಿ ಕಾತರಕಿ, ಕಾರ್ಯದರ್ಶಿ ತಿಪ್ಪವ್ವ ಮುಟಗಾರ, ಯುವ ಸಮಿತಿ ಉಪಾಧ್ಯಕ್ಷ ಯಲ್ಲಪ್ಪ ರಾಮಗಿರಿ ಮಾತನಾಡಿದರು. ರಸೂಲಸಾಬ್ ಮುಳಗುಂದ, ಸಲಿಂ ಬಳ್ಳಾರಿ, ಜಗದೀಶ ಜಡಿಯವರ, ಅಬುಬಕ್ಕರ್ ಮಕಾಂದಾರ, ರಾಜು ಕಣಗಿನಹಾಳ, ಬಸವರಾಜ ಬಿಳೆಯಲಿ, ನವೀನ ಬಣಕಾರ, ನಾಗರಾಜ ಮುಟಗಾರ, ಪೀಟರ್ ಅಲಸೂರ, ಸುಮಿತ್ರಾ ಬಳ್ಳಾರಿ, ಬಶೀರಾಬೇಗಂ ಬಳ್ಳಾರಿ ಮುಂತಾದವರು ಉಪಸ್ಥಿತರಿದ್ದರು. ಪರಶುರಾಮ ಕಾಳೆ ಸ್ವಾಗತಿಸಿದರು. ಸ್ಲಂ ಯುವ ಸಮಿತಿ ಅಧ್ಯಕ್ಷ ಶರೀಫ ಬಿಳೆಯಲಿ ನಿರೂಪಿಸಿದರು. ಅನೀಲ ಕಾಳೆ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

