ಗದಗ

ಬಾಲಮೇಳ ಕಾರ್ಯಕ್ರಮ

Published On :

ಗದಗ: ಮಕ್ಕಳನ್ನು ದೇವರಂತೆ ತಿಳಿದು ಪಾಲಕರು ಪಾಲನೆ ಪೋಷಣೆ ಮಾಡಬೇಕು ಎಂದು ತಾಪಂ ಸದಸ್ಯ ಎನ್.ಟಿ. ಪ್ಯಾಟಿ ಹೇಳಿದರು.
ಅವರು ಈಚೆಗೆ ತಾಲೂಕಿನ ಹೊಸ ಡಂಬಳ ಗ್ರಾಮದಲ್ಲಿರುವ ಅಂಗನವಾಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಪೌಷ್ಟಿಕತೆಯಿಂದ ಬಾಲ ಮಕ್ಕಳು ತೊಂದರೆಗೀಡಾಗುತ್ತಿವೆ. ಸರ್ಕಾರ ಮಕ್ಕಳ ಆರೋಗ್ಯ ಕಾಪಾಡಲು ಪೌಷ್ಟಿಕ ಆಹಾರ ಸೇರಿದಂತೆ ಹಲವಾರು ಯೋಜನೆ ಜಾರಿಗೆ ತಂದಿದ್ದು, ಪಾಲಕರು ಯೋಜನೆಗಳ ಸದುಪಯೋಗ ಪಡೆದು, ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳೆವಣಿಗೆಗೆ ಶ್ರಮಿಸಬೇಕು.
ಇಂದು ಮಕ್ಕಳು ಹಲವು ಕಾಯಿಲೆಗಳಿಗೆ ತುತ್ತಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಅಲ್ಲದೇ ಮಕ್ಕಳಿಗೆ ಸಮರ್ಪಕ ಹಾಗೂ ಪೌಷ್ಟಿಕ ಆಹಾರ ಸಿಗದೇ ಅನಾರೋಗ್ಯದಿಂದ, ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇದನ್ನು ಗಮನಿಸಿ ಸರ್ಕಾರವು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಪೌಷ್ಟಿಕ ಆಹಾರ ವಿತರಿಸುವ ಮೂಲಕ ಮಕ್ಕಳ ಏಳ್ಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀಬಾಯಿ ಚಿಕ್ಕರಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂದಾನಯ್ಯ ಕರವೀರಮಠ, ತಿಮ್ಮಣ್ಣ ಮುಳಗುಂದ (ಚಕ್ರಭೋವಿ), ಸಿದ್ದಲಿಂಗಯ್ಯ ಕಾಡಸಿದ್ದೇಶ್ವರಮಠ, ರಾಜಪ್ಪ ಕರ್ಣಿ, ಕುಮಾರ ಕಟ್ಟಿಮನಿ ಉಪಸ್ಥಿತರಿದ್ದರು. ವಿಜಯ ಬಡಿಗೇರ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.