14ರಂದು ಕೃಷಿ ಉತ್ಸವ, ಮಾಹಿತಿ ಆಂದೋಲನ
ಗದಗ: ಜಿಲ್ಲಾಡಳಿತ, ಜಿಪಂ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗದಗ, ಕೃಷಿ ವಿಶ್ವ ವಿದ್ಯಾಲಯ ಧಾರವಾಡ, ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರ ಗದಗ ಮತ್ತು ಜಿಲ್ಲಾ ಕೃಷಿಕ ಸಮಾಜ ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕೃಷಿ ಉತ್ಸವ ಮತ್ತು ಮಾಹಿತಿ ಆಂದೋಲನ ಕಾರ್ಯಕ್ರಮವನ್ನು ಡಿ. 14ರಂದು ಬೆಳಗ್ಗೆ 10 ಗಂಟೆಗೆ ನಗರದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ಕೃಷಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆಯನ್ನು ಧಾರವಾಡ ಕೃಷಿ ವಿವಿ ಕುಲಪತಿ ಡಾ. ಎಚ್.ಎಸ್. ವಿಜಯಕುಮಾರ ನೆರವೇರಿಸುವರು. ಅತಿಥಿಗಳಾಗಿ ಸಂಸದರು, ಶಾಸಕರು, ಜಿಪಂ, ತಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಎಪಿಎಂಸಿ ಅಧ್ಯಕ್ಷರು, ಜಿಪಂ ಸದಸ್ಯರು ಆಗಮಿಸುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಕೃಷಿ ಇಲಾಖೆಯ ನಿರ್ದೇಶಕರು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪ್ರಾದೇಶಿಕ ನಿರ್ದೇಶಕರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರು, ಸಹ ಕೃಷಿ ವಿಸ್ತರಣಾ ನಿರ್ದೇಶಕರು, ಕೆವಿಕೆ ಹುಲಕೋಟಿಯ ಕಾರ್ಯಕ್ರಮ ಸಂಯೋಜಕರು, ವಿಸ್ತರಣಾ ಶಿಕ್ಷಣ ಘಟಕದ ವಿಸ್ತರಣಾ ಮುಂದಾಳು ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

