ನಾಳೆ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ
ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಡಿ. 11
ಡಾ. ಸುಜ್ಞಾನದೇವ ಶಿವಾಚಾರ್ಯ ಮಹಾಸ್ವಾಮಿಗಳ ಗುರು ಪಟ್ಟಾಧಿಕಾರದ ರಜತ ಮಹೋತ್ಸವದ ಅಂಗವಾಗಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಡಿ. 13 ರಂದು ಮಧ್ಯಾಹ್ನ 3ಕ್ಕೆ ರಂಭಾಪುರಿ ಮತ್ತು ಉಜ್ಜಯಿನಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮ ನೆರವೇರಲಿದೆ. ಪ್ರಮುಖ ಬೀದಿಗಳಲ್ಲಿ ಸಕಲ ಬಿರುದಾವಳಿಗಳೊಂದಿಗೆ ಪೂರ್ಣಕುಂಭ ಮತ್ತು ಕಲಶದ ಸ್ವಾಗತದೊಡಗೂಡಿ ಕಾರ್ಯಕ್ರಮ ನಡೆಯಲಿದೆ ಎಂದು ಬನ್ನಿಕೊಪ್ಪ ಬೃಹನ್ಮಠದ ಸುಜ್ಞಾನದೇವ ಶಿವಾಚಾರ್ಯ ಶ್ರೀಗಳು ಹೇಳಿದರು.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಂಭಾಪುರಿ ಮತ್ತು ಉಜ್ಜಯಿನಿ ಜಗದ್ಗುರುಗಳು ಸಾನ್ನಿಧ್ಯವಹಿಸಲಿದ್ದು, ಕೆಳದಿ ರಾಜಗುರು ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಶಿರಕೋಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು, ಮಧುಕೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮಿಗಳಿಂದ ಉಪದೇಶಾಮೃತ ನಡೆಯಲಿದೆ. ಅತಿಥಿಗಳಾಗಿ ಮಾಜಿ ಶಾಸಕ ಜಿ.ಎಸ್. ಗಡ್ಡದ್ದೇವರಮಠ, ತಾಪಂ ಸದಸ್ಯ ತಿಮ್ಮರಡ್ಡಿ ಅಳವಂಡಿ, ಪಾರವ್ವ ಈಟಿ, ಡಾ.ಯು.ಎ. ಪುರದ, ಬಸಣ್ಣ ಮಲ್ಲಾಡದ ಆಗಮಿಸಲಿದ್ದಾರೆ. ಖಾನಾಹೊಸಳ್ಳಿಯ ನಿವೃತ್ತ ಪ್ರಾಚಾರ್ಯ ಡಾ. ಎ.ವಿ. ಆಚಾರ್ಯ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಜಡೆಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು, ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿರುವರು. ಡಿ. 14ರಂದು ಬೆಳಗ್ಗೆ 7ಕ್ಕೆ ವೀರಮಾಹೇಶ್ವರ ವಟುಗಳಿಗೆ ದೀಕ್ಷಾ ಆಯ್ಯಾಚಾರ ಕಾರ್ಯಗಳು ನಡೆಯಲಿವೆ. ರಂಭಾಪುರಿ ಜಗದ್ಗುರುಗಳು ಸಾನ್ನಿಧ್ಯವಹಿಸಲಿದ್ದು, ಡಾ. ಸುಜ್ಞಾನದೇವ ಶಿವಾಚಾರ್ಯ ಮಹಾಸ್ವಾಮಿಗಳವರ ರಜತ ಮಹೋತ್ಸವದ ನಿಮಿತ್ತವಾಗಿ ಪುಣ್ಯೌಹನಾಂದೀ ನವಗ್ರಹ ಮೃತ್ಯುಂಜಯ ಪೂಜ್ಯ ಶ್ರೀಗಳಿಗೆ ಮಂಗಲ ಸ್ನಾನಾದಿಗಳು, ಗಂಗಾಪೂಜೆಯೊಂದಿಗೆ ಪೂಜಾದಿ ಕಾರ್ಯಕ್ರಮಗಳು ಜರುಗಲಿದ್ದು, ವಿವಿಧ ಮಠಾಧೀಶರು ಪೌರೋಹಿತ್ಯ ವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಧರ್ಮೋತ್ತೇಜಕ ಸಭೆ, ಗುರು ಪಟ್ಟಾಧಿಕಾರದ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ರಂಭಾಪುರಿ ಜಗದ್ಗುರುಗಳು ಸಾನ್ನಿಧ್ಯವಹಿಸಲಿದ್ದಾರೆ. ಸಚಿವ ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಮಠಾಧೀಶರಿಂದ ಉಪದೇಶಾಮೃತ ಜರುಗಲಿದೆ.
ಅತಿಥಿಗಳಾಗಿ ಶಾಸಕ ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕ ಜಿ.ಎಸ್. ಗಡ್ಡದ್ದೇವರಮಠ, ಜಿ.ಎಂ. ಮಹಾಂತಶೆಟ್ಟರ, ಎಸ್.ಎನ್. ಪಾಟೀಲ, ರಾಮಣ್ಣ ಲಮಾಣಿ, ಜಿಪಂ ಸದಸ್ಯೆ ಕಮಲವ್ವ ಸಜ್ಜನರ, ಶಿವಪ್ರಕಾಶ ಮಹಾಜನಶೆಟ್ಟರ್, ಎಂ.ಎಚ್. ಪಾಟೀಲ ಆಗಮಿಸಲಿದ್ದಾರೆ. ಕೆ.ಎ. ಬಳಿಗೇರ ಅವರಿಂದ ಉಪನ್ಯಾಸ ನಡೆಯಲಿದೆ ಎಂದು ಶ್ರೀಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

