ಸೇವಾದಳದಿಂದ ನಿಸ್ವಾರ್ಥ ಸೇವೆ
ಲಕ್ಷ್ಮೇಶ್ವರ: ಸೇವಾದಳವು ನಿಸ್ವಾರ್ಥದಿಂದ ದೇಶ ಸೇವೆ ಮಾಡುವ ಸಂಸ್ಥೆಯಾಗಿದ್ದು, ಜನರಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತುವ ಕಾರ್ಯ ಮಾಡುವುದರ ಜತೆಯಲ್ಲಿ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಅಭಿಪ್ರಾಯ ಪಟ್ಟರು.
ಅವರು ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ ನಂ. 4ರಲ್ಲಿ ಸೋಮವಾರ ನಡೆದ ಸೇವಾದಳದ ಮಿಲಾಪ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಜನರು ಆಧುನಿಕತೆಯ ಪ್ರಭಾವಕ್ಕೆ ಸಿಲುಕಿ ದುಶ್ಚಟಗಳಿಗೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಾರೆ. ಸೇವಾದಳವು ಇಂತಹ ಜನರಿಗೆ ತಿಳಿ ಹೇಳುವ ಕಾರ್ಯವನ್ನು ಮಾಡುವುದರ ಜತೆಯಲ್ಲಿ ಸಮಾಜಕ್ಕೆ ಉತ್ತಮ ಮಾರ್ಗದರ್ಶನ ನೀಡುವ ಕಾರ್ಯ ಮಾಡಬೇಕು. ಸೇವಾದಳದವರು ಮಕ್ಕಳ ಮೇಳ ಮಾಡಲು ತೀರ್ಮಾನಿಸಿದ್ದಲ್ಲಿ ಆ ಶಿಬಿರಕ್ಕೆ ಅಗತ್ಯವಾದ ಎಲ್ಲ ನೆರವು ನೀಡಲು ಸಿದ್ಧ ಎಂದರು. ಗದಗ ಜಿಲ್ಲಾ ಸೇವಾದಳದ ಸಂಘಟಕ ಕುಮಾರಸ್ವಾಮಿ ಬಳ್ಳಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಗದಗ ಜಿಲ್ಲಾ ಸೇವಾದಳದ ಅಧ್ಯಕ್ಷ ಆರ್.ಎಫ್. ಪುರಾಣಿಕಮಠ, ಬಿಇಒ ಆರ್.ಎಸ್. ಬುರಡಿ, ಸೇವಾದಳದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಎಚ್.ಎಚ್. ಬಳ್ಳಾರಿ, ತಾಪಂ ಸದಸ್ಯ ನಿಂಬಣ್ಣ ಮಡಿವಾಳರ, ಶಿರಹಟ್ಟಿ ಪಪಂ ಸದಸ್ಯ ಸಂತೋಷ ಕುರಿ ಮುಂತಾದವರು ಹಾಜರಿದ್ದರು. ಎನ್.ಎನ್. ಕಲಕೇರಿ ನಿರೂಪಿಸಿದರು. ಶಿಕ್ಷಕ ಜಾಡರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

