ಗದಗ

ತರಬೇತಿಗೆ ಅರ್ಜಿ ಆಹ್ವಾನ

Published On :

ಗದಗ: 2013-14ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷದ ಒಳಗೆ ಕಾನೂನು ಪದವಿ ಹೊಂದಿರಬೇಕು. ತರಬೇತಿಯ ಅವಧಿಯು 4 ವರ್ಷಗಳಾಗಿದ್ದು, ಅರ್ಜಿ ನಮೂನೆಗಳನ್ನು ಕಚೇರಿಯ ವೇಳೆಯಲ್ಲಿ ಪಡೆದು ಅರ್ಜಿಯ ಜತೆಗೆ ಅಂತಿಮ ವರ್ಷದ ಕಾನೂನು ಪದವಿಯ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಣಿ ಪ್ರಮಾಣ ಪತ್ರ ಇತ್ಯಾದಿಗಳನ್ನು ಲಗತ್ತಿಸಿ ಅರ್ಜಿಯನ್ನು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಆಡಳಿತ ಭವನ, ರೂ. ನಂ. 107, ಮೊದಲನೇ ಮಹಡಿ, ಹುಬ್ಬಳ್ಳಿ ರೋಡ್ ಗದಗ ಇವರಿಗೆ ಡಿ. 26ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಗದಗ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.