ಗದಗ

ಈರುಳ್ಳಿ ಬೆಲೆ ಕುಸಿತ: ಗದುಗಿನಲ್ಲಿ ಪ್ರತಿಭಟನೆ

Published On :

ಗದಗ: ಗದಗ ಎಪಿಎಂಸಿ ಮಾರುಕಟ್ಟೆಯಲ್ಲಿ ಒಂದು ವಾರದಿಂದ ಈರುಳ್ಳಿ ಬೆಲೆಯು ಸಂಪೂರ್ಣ ಇಳಿಕೆಯಾಗಿದೆ. ಬೆಲೆ ಇಳಿಕೆಯಲ್ಲಿ ದಲ್ಲಾಳಿಗಳು ಹಾಗೂ ವ್ಯಾಪಾರಸ್ಥರು ಶಾಮೀಲಾಗಿದ್ದಾರೆಂದು ಆರೋಪಿಸಿ ಗುರುವಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರೈತ ಈರಯ್ಯ ಲಾಯಲಗುಂದಿ ಮಾತನಾಡಿ, 'ಬುಧವಾರ ದೊಡ್ಡ ಗಾತ್ರದ ಈರುಳ್ಳಿ ಕ್ವಿಂಟಲ್‌ಗೆ 2 ಸಾವಿರದಿಂದ ಹಿಡಿದು 2400, 2500 ವರೆಗೆ ಮಾರಾಟ ಮಾಡಲಾಗಿದೆ. ಆದರೆ, ಗುರುವಾರ ದೊಡ್ಡಗಾತ್ರದ ಈರುಳ್ಳಿಯನ್ನು ಕೇವಲ 500-800 ರವರೆಗೆ ಕೇಳಲಾಗುತ್ತಿದೆ' ಎಂದು ಆರೋಪಿಸಿದರು.
ಪೊಲೀಸರೊಂದಿಗೆ ವಾಗ್ವಾದ: ರೈತರು ಪ್ರತಿಭಟನೆ ನಡೆಸುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ರೈತರ ಮನವೊಲಿಕೆ ನಡೆಸಿ ಮತ್ತೆ ಈರುಳ್ಳಿ ವ್ಯಾಪಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮತ್ತೆ ದಲ್ಲಾಳಿಗಳು ಈರುಳ್ಳಿಗೆ ರು. 1000 ಸಾವಿರದಿಂದ 1200ಕ್ಕೆ ಕೇಳುತ್ತಿದ್ದಂತೆಯೇ ಆಕ್ರೋಶಗೊಂಡ ರೈತರು ಮತ್ತೆ ದಲ್ಲಾಳಿಗಳನ್ನು ಹಾಗೂ ವ್ಯಾಪಾರಸ್ಥರನ್ನು ತರಾಟೆಗೆ ತಗೆದುಕೊಂಡರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ರೈತರ ಮಧ್ಯೆ ಕೆಲಕಾಲ ಮಾತಿನ ವಾಗ್ವಾದ ಜರುಗಿತು. ನಂತರ ಪ್ರತಿಭಟನಾಕಾರರು ನಗರದ ಹಳೆ ಡಿಸಿ ಕಚೇರಿಯ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.