ಗದಗ

ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಗದಗ:  ಸಮಾಜ ಕಲ್ಯಾಣ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಲ್ಲಿ ಕನಿಷ್ಠ ಮೂಲಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್.ಎಫ್.ಐ.) ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎಸ್.ಎಫ್.ಐ.ನ ಜಿಲ್ಲಾ ಕಾರ್ಯದರ್ಶಿ ಶಿವು ಚವ್ಹಾಣ ಮಾತನಾಡಿ, ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಅಗತ್ಯಕ್ಕೆ ಅನುಗುಣವಾಗಿ ಶೌಚಾಲಯ, ಗ್ರಂಥಾಲಯ, ದಿನಪತ್ರಿಕೆ, ಕ್ರೀಡಾ ಸಾಮಗ್ರಿಗಳ ಮತ್ತು ಗುಣಮಟ್ಟದ ಆಹಾರ ಹಾಗೂ ಶುದ್ಧನೀರಿನ ಕೊರತೆಯಿಂದ ಅತ್ಯಂತ ಕನಿಷ್ಠ ಬದುಕನ್ನು ಸಾಗಿಸುವ ದುಸ್ಥಿತಿ ಎದುರಿಸುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಸ್ಥಿತಿ ಶೋಚನೀಯವಾಗಿದೆ. ವಸತಿ ನಿಲಯಗಳು ಶೈಕ್ಷಣಿಕ ವಾತಾವರಣಕ್ಕೆ ಪೂರಕವಾಗಿರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಕಷ್ಟಕರವಾಗಿದೆ.  
ಶಿಕ್ಷಣದಿಂದ ವಂಚಿಸುವ ಅಧಿಕಾರಿ ವರ್ಗದ ಈ ದ್ವಿಮುಖ ನೀತಿಯನ್ನು ಎಸ್‌ಎಫ್‌ಐ ಸಂಘಟನೆ ತೀವ್ರವಾಗಿ ಖಂಡಿಸುತ್ತಿದ್ದು, ನಮ್ಮೆಲ್ಲರ ಬೇಡಿಕೆಗಳಿಗೆ ಸ್ಪಂದನೆ ದೊರೆಯದಿದ್ದಲ್ಲಿ ಎಸ್‌ಎಫ್‌ಐ ಸಂಘಟನೆ ಉಗ್ರ ಹೋರಾಟಕ್ಕೆ ಮುಂದಾಗಲಿದೆ ಎಂದರು.
ಬೆಳಗ್ಗೆ ಬೆಟಗೇರಿ ಗಾಂಧಿನಗರ ಕ್ರೀಡಾಂಗಣದಿಂದ ಮೆರವಣಿಗೆಯ ಮೂಲಕ ಆಗಮಿಸಿದ ವಸತಿ ನಿಲಯಗಳ ವಿದ್ಯಾರ್ಥಿಗಳು ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಂತರ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಮನವಿಗೆ ಸಂಪೂರ್ಣ ಸ್ಪಂದಿಸಿ ಮೂಲಸೌಕರ್ಯ ಕಲ್ಪಿಸುವ ಭರವಸೆ ನೀಡಿದ ಬಳಿಕೆ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರತಿಭಟನೆಯಲ್ಲಿ ಸಾಗರ ಮಾಡಳ್ಳಿ, ದೇವು ನಾಯಕ, ಚನ್ನಪ್ಪ ಕಾರಬಾರಿ, ಸುನೀಲ ಲಮಾಣಿ, ಪ್ರಕಾಶ ಲಮಾಣಿ, ಶಿವಾನಂದ ಬೋಸ್ಲೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.