ಪ್ರತ್ಯೇಕ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿ
ಗದಗ: ಕೊಳಚೆ ಪದೇಶಗಳಲ್ಲಿ ವಾಸಿಸುತ್ತಿರುವ ಕೂಲಿ ಕಾರ್ಮಿಕರ ಬಡಕುಟುಂಬಗಳ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಜನಸಂಖ್ಯೆ ಅನುಗುಣವಾಗಿ ಪ್ರತ್ಯೇಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವೆಂಕಟೇಶಯ್ಯ ಹೇಳಿದರು. ಇತ್ತೀಚಿಗೆ ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ಸ್ಲಂ ಮಹಿಳಾ ಸಮಿತಿ ಹಾಗೂ ಶಾಖೆ ವತಿಯಿಂದ ಆಯೋಜಿಸಲಾದ ಸಾರ್ವಜನಿಕರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಮಿತಿ ಅಧ್ಯಕ್ಷ ಅಶೋಕ ಮ್ಯಾಗೇರಿ ಮಾತನಾಡಿದರು. ಸ್ಲಂ ಮಹಿಳಾ ಸಮಿತಿ ಅಧ್ಯಕ್ಷೆ ಉಮಾದೇವಿ ಕಾತರಕಿ, ಕಾರ್ಯದರ್ಶಿ ತಿಪ್ಪವ್ವ ಮುಟಗಾರ, ಡಾ. ಪ್ರವೀಣಕುಮಾರ ಪಾಟೀಲ, ಡಾ. ಪುಷ್ಪಾ ಎನ್., ಜಿಲ್ಲಾ ಸ್ಲಂ ಸಮಿತಿ ಕಾರ್ಯದರ್ಶಿ ಇಮ್ತಿಯಾಜ್ ಮಾನ್ವಿ, ಸ್ಲಂ ಯುವ ಸಮಿತಿ ಉಪಾಧ್ಯಕ್ಷ ಯಲ್ಲಪ್ಪ ರಾಮಗಿರಿ, ಗೌರಮ್ಮ ಶಿರಗುಪ್ಪಿ, ತಾಹೇರಾಬೇಗಂ ಗುಳಗುಂದಿ, ಶಹಜಾನಬಿ ಕರ್ನಾಚಿ, ದ್ಯಾಮಣ್ಣ ಡೋಣಿ, ಅಶೋಕ ಕುಸಬಿ, ರಸೂಲಸಾಬ ಮುಳಗುಂದ, ನಾಗರಾಜ ಮುಟಗಾರ, ನವೀನ ಬಣಕಾರ, ಸಲೀಂ ಬಳ್ಳಾರಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

