ಗದಗ

ಅಹವಾಲು ಸ್ವೀಕಾರ

Published On :

ಗದಗ: ಲೋಕಾಯುಕ್ತ, ಗದಗ ಘಟಕದ ಆರಕ್ಷಕ ಉಪಾಧೀಕ್ಷಕ ಕೆ.ಸಿ. ಅಸುಂಡಿ ಜಿಲ್ಲೆಯ ತಾಲೂಕುಗಳಿಗೆ ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ದೂರು ಅರ್ಜಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಡಿ. 23ರಂದು ಬೆಳಗ್ಗೆ 11ರಿಂದ ಮ. 1 ಗಂಟೆ ವರೆಗೆ ರೋಣ ತಾ.ಪಂ. ಸಭಾಭವನದಲ್ಲಿ, ಮಧ್ಯಾಹ್ನ 3ರಿಂದ ಸಂಜೆ 5 ಗಂಟೆ ವರೆಗೆ ನರಗುಂದದ ಹಳೆ ತಹಸೀಲ್ದಾರ್ ಕಚೇರಿಯಲ್ಲಿ, ಡಿ. 24ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಶಿರಹಟ್ಟಿ ತಾಪಂ ಸಭಾಭವನದಲ್ಲಿ, ಮ. 3ರಿಂದ ಸಂಜೆ 5 ಗಂಟೆ ವರೆಗೆ ಮುಂಡರಗಿ ತಾಪಂ ಸಭಾಭವನದಲ್ಲಿ, ಡಿ. 26ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಗದಗ ತಾಪಂ ಸಭಾಭವನದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ. ಗದಗ ತಾಲೂಕಿಗೆ ಸಂಬಂಧಿಸಿದಂತೆ ಯಾವುದಾದರೂ ದೂರು, ಅರ್ಜಿಗಳಿದ್ದಲ್ಲಿ ಗದಗ ಜಿಲ್ಲಾ ಕೇಂದ್ರದಲ್ಲಿರುವ ಆರಕ್ಷಕ ಉಪಾಧೀಕ್ಷಕರು ಮತ್ತು ಪೊಲೀಸ್ ಇನ್‌ಸ್ಪೆಕ್ಟರ್, ಕರ್ನಾಟಕ ಲೋಕಾಯುಕ್ತ ಕಚೇರಿಗಳಿಗೆ ಪ್ರತಿ ದಿನ ಅರ್ಜಿ, ದೂರು ಸಲ್ಲಿಸಬಹುದಾಗಿದೆ.
ಸರ್ಕಾರಿ ನೌಕರರ ಸಂಘಕ್ಕೆ ನೇಮಕ
ಗದಗ:  ರಾಜ್ಯ ಸರ್ಕಾರಿ ನೌಕರರ ಗದಗ ಜಿಲ್ಲಾ ಸಂಘದ ಪ್ರಚಾರ ಕಾರ್ಯದರ್ಶಿಯಾಗಿ ವಾರ್ತಾ ಇಲಾಖೆಯ ಎಂ.ಟಿ. ನೇಮರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರೇಮನಾಥ ಗರಗ ಹಾಗೂ ಕಾರ್ಯದರ್ಶಿ ರವಿ ಗುಂಜೀಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.