ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕೆ ಪ್ರೋತ್ಸಾಹ: ಶಾಸಕ ದೊಡ್ಡಮನಿ
ಮುಂಡರಗಿ: ಕ್ಷೀರಭಾಗ್ಯ, ಬಿಸಿಯೂಟ, ಉಚಿತ ಶಾಲಾ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಬುಧವಾರ ತಾಲೂಕಿನ ಶಿಂಗಟಾಲೂರು ಕ್ಷೇತ್ರದಲ್ಲಿರುವ ವೀರಭದ್ರೇಶ್ವರ ಸರ್ಕಾರಿ ಪ್ರೌಢಶಾಲೆಯ ನೂತನ ಎಸ್ಡಿಎಂಸಿ ಉದ್ಘಾಟನೆ ಹಾಗೂ ಸೈಕಲ್ ವಿತರಣೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮೂಢನಂಬಿಕೆಯಿಂದ ಹೊರಬರುವುದು ಅವಶ್ಯವಾಗಿದೆ. ಟಿವಿಗಳಲ್ಲಿ ಬರುವಂತಹ ಅನೇಕ ಮೂಢನಂಬಿಕೆ ಬಿತ್ತುವ ಕಾರ್ಯಕ್ರಮಗಳನ್ನು ಯಾರೂ ವೀಕ್ಷಿಸಬಾರದು. ಓದಿನ ಕಡೆಗೆ ಹೆಚ್ಚು ಗಮನಹರಿಸಬೇಕು. ಸರ್ಕಾರ ಇಂದು ಮಹಿಳೆಯರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಹೆಚ್ಚು ಅಂಕ ಪಡೆದುಕೊಳ್ಳುವ ಮೂಲಕ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಜಿ.ಎಸ್. ಅಣ್ಣಿಗೇರಿ ಅಧ್ಯಕ್ಷತೆ ವಹಿಸಿದ್ದರು. ಶಿಂಗಟಾಲೂರು ಗ್ರಾಪಂ ಉಪಾಧ್ಯಕ್ಷ ಉಮಾ ಶಿರಹಟ್ಟಿ, ಈರಣ್ಣ ಮುಂಡವಾಡ, ಶಂಕರಗುರು ಬಿಳಿಮಗ್ಗದ, ಉಮಾ ಶಿರಹಟ್ಟಿ, ರಮೇಶಪ್ಪ ಅಂಗಡಿ, ಮಹೇಂದ್ರ ಮುಂಡವಾಡ, ದಂಡೆಪ್ಪ ಹರಿಜನ, ರುದ್ರಗೌಡ ಪಾಟೀಲ, ಈರಣ್ಣ ಗುಂಡ್ಲೂರು ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕಿ ಎಸ್. ಉಮಾದೇವಿ ಸ್ವಾಗತಿಸಿದರು. ಎಂ.ಬಿ. ಮೇಟಿ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

