ಗದಗ

ವಿದ್ಯಾರ್ಥಿಗಳ ಮೇಲೆ ಹಲ್ಲೆ: ಶಾಲೆಗೆ ಮುತ್ತಿಗೆ

Published On :

ಕನ್ನಡಪ್ರಭ ವಾರ್ತೆ, ಗದಗ, ಡಿ. 18
ನಗರದ ಸಿಡಿಒ ಜೈನ್ ಸ್ಕೂಲ್‌ನಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯನೋರ್ವನು ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಘಟನೆ ಕಳೆದ ಸೋಮವಾರ ಜರುಗಿದ್ದು, ಆಕ್ರೋಶಗೊಂಡ ವಿದ್ಯಾರ್ಥಿಗಳು, ಪಾಲಕರು ಬುಧವಾರ ಸಿಡಿಒ ಜೈನ್ ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರದ ರಾಚೂಟೇಶ್ವರ ನಗರದಲ್ಲಿರುವ ಸಿಡಿಒ ಜೈನ್ ಶಾಲೆಯಲ್ಲಿ ಸೋಮವಾರದಂದು ಜರುಗಿದ ಶಾಲೆಯ ಆಡಳಿತ ಮಂಡಳಿಯ ಸಭೆಯಲ್ಲಿ ಪಾಲ್ಗೊಂಡಿದ್ದ ಆಡಳಿತ ಮಂಡಳಿಯ ಸದಸ್ಯ ಕುಮಾರ ಲಾಲ್ಕಾ ಎಂಬುವವರು ಶಾಲೆಯಲ್ಲಿ ವಿದ್ಯಾರ್ಥಿಗಳು ಗಲಾಟೆ ಮಾಡುತ್ತಿದ್ದಾರೆಂದು ಆರೋಪಿಸಿ, 14 ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ. ಚೇರ್ ಹಾಗೂ ಬೂಟುಗಾಲಿನಿಂದ ಒದ್ದಿರುವುದರಿಂದ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಶಾಲೆಯಿಂದ ಮನೆಗೆ ತೆರಳಿದ ವಿದ್ಯಾರ್ಥಿಗಳನ್ನು ಪಾಲಕರು ನೋಡಿ ಆಕ್ರೋಶಗೊಂಡು ಬುಧವಾರ ಬೆಳಗ್ಗೆ ಶಾಲೆಗೆ ಆಗಮಿಸಿ ಆಡಳಿತ ಮಂಡಳಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ಕೂಡಲೇ ಮಕ್ಕಳ ಮೇಲೆ ಹಲ್ಲೆ ಮಾಡಿದ ಆಡಳಿತ ಮಂಡಳಿಯ ಸದಸ್ಯ ಕುಮಾರ ಲಾಲ್ಕಾ ಸ್ಥಳಕ್ಕೆ ಆಗಮಿಸಿ ಕ್ಷಮೆಯಾಚಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪಾಲಕರು ಪ್ರತಿಭಟಿಸಿದರು. ಇದರಿಂದಾಗಿ ಶಾಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು. ಘಟನಾ ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಕೃಷ್ಣವೇಣಿ ಪ್ರತಿಭಟನಾಕಾರರ ಮನವೊಲಿಸಲು ಮುಂದಾದರು. ಆದರೂ ಪಟ್ಟುಬಿಡದ ಪಾಲಕರು ಸದಸ್ಯನು ಕ್ಷಮೆಯಾಚಿಸುವವರೆಗೂ ಮತ್ತು ಈ ಕೂಡಲೇ ಕುಮಾರಲಾಲ್ಕಾನನ್ನು ಆಡಳಿತ ಮಂಡಳಿಯಿಂದ ತೆಗೆದು ಹಾಕಿ, ಅವನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.