ಗದಗ

ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಮನವಿ

Published On :

ಶಿರಹಟ್ಟಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸುಧಾರಣಾ ಸಮಿತಿ ರಚನೆ ವಿಳಂಬ ಕುರಿತು ಗ್ರಾಮಸ್ಥರ ಆರೋಪದ ಹಿನ್ನೆಲೆಯಲ್ಲಿ ಸುದ್ದಿ ಮಾಡಲು ಹೋದ ವರದಿಗಾರನ ಮೇಲೆ ಬುಧವಾರ ಏಕಾಏಕಿ ಹಲ್ಲೆ ನಡೆಸಿದ್ದನ್ನು ಶಿರಹಟ್ಟಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಗುರುವಾರ ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರ ಅವರಿಗೆ ಮನವಿ ಸಲ್ಲಿಸಿ, ಹಿರಿಯ ಪತ್ರಕರ್ತ ಜಿ.ಬಿ. ಹೆಸರೂರ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕನೇ ಮುಖ್ಯ ಅಂಗ ಪತ್ರಿಕಾರಂಗ. ಸಮಾಜದ ಅಂಕುಡೊಂಕು ತಿದ್ದಿ ಹಾಗೂ ಸಮಾಜದಲ್ಲಿ ನಡೆಯುವಂತಹ ಘಟನೆಗಳ ನೈಜ ವರದಿ ಮಾಡುವ ಕೆಲಸ ನಮ್ಮದಾಗಿದೆ. ನರಗುಂದ ತಾಲೂಕು ಹಿರೇಕೊಪ್ಪ ಗ್ರಾಮದ ಶಾಲೆಯ ಎಸ್‌ಡಿಎಂಸಿ ರಚನೆ ಕುರಿತು ಸುದ್ದಿ ಮಾಡಿದ ಸುದ್ದಿಗಾರ ಎಸ್.ಎಸ್. ಖಾನಪ್ಪಗೌಡ ಅವರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸುತ್ತೇವೆ ಎಂದರು.
ಘಟನೆಯಲ್ಲಿ ಹಲ್ಲೆಗೊಳಗಾದ ವರದಿಗಾರನಿಗೆ ಸೂಕ್ತ ರಕ್ಷಣೆ ನೀಡಬೇಕು. ಮುಂದಿನ ದಿನಮಾನದಲ್ಲಿ ವರದಿಗಾರರ ಮೇಲೆ ಈ ರೀತಿ ಘಟನೆ ಜರುಗದಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಂಘದ ಪರವಾಗಿ ಆಗ್ರಹಿಸಿದರು. ಅಧಿಕಾರಿಗಳು ವಿಳಂಬ ನೀತಿ ಅನುಸರಿಸಿದರೆ ಜಿಲ್ಲಾ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರ ಮನವಿ ಸ್ವೀಕರಿಸಿ ಮಾತನಾಡಿ, ವರದಿಗಾರರ ಮೇಲೆ ನಡೆದ ಹಲ್ಲೆ ಕುರಿತು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಕಳುಹಿಸಿಕೊಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವರದಿಗಾರರಾದ ಎ.ಎಚ್. ಖಾಜಿ, ಮಂಜುನಾಥ ಅರೇಪಲ್ಲಿ, ಮಹದೇವಪ್ಪ ಎಂ. ಸ್ವಾಮಿ, ಬಸವರಾಜ ವಡವಿ, ಶ್ರೀಕಾಂತ ಈಳಗೇರ, ನಾಗನಗೌಡ ಮರಿಗೌಡ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.