ಗದಗ

ಲಕ್ಕುಂಡಿ ಗ್ರಾಪಂ ಅಧ್ಯಕ್ಷೆ ಪದಚ್ಯುತಿ

Published On :

ಕನ್ನಡಪ್ರಭ ವಾರ್ತೆ, ಗದಗ, ಡಿ. 19
ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಬುಧವಾರ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜರುಗಿದ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಅಧ್ಯಕ್ಷೆ ಗಂಗವ್ವ ಮಜ್ಜಿಗುಡ್ಡ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಜಯವಾಯಿತು.
ಬೆಳಗ್ಗೆ 11 ಗಂಟೆಗೆ ಆರಂಭವಾದ ಅವಿಶ್ವಾಸ ಗೊತ್ತುವಳಿಯ ಸಭೆಗೆ ಆಗಮಿಸಿದ ಚುನಾವಣಾಧಿಕಾರಿ ಗದಗ ಉಪವಿಭಾಗಾಧಿಕಾರಿ ಇಸ್ಲಾವುದ್ಧಿನ್ ಗದ್ಯಾಳ ವಿಷಯ ತಿಳಿಸಿದರು. ಅವಿಶ್ವಾಸದ ಪರ 22 ಸದಸ್ಯರು ಕೈ ಎತ್ತುವ ಮೂಲಕ ಬೆಂಬಲಿಸಿದರು. ಅವಿಶ್ವಾಸ ಗೊತ್ತುವಳಿಯನ್ನು 7 ಸದಸ್ಯರು ವಿರೋಧಿಸಿದರು. ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 29 ಸದಸ್ಯರಿದ್ದಾರೆ.
ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ನವೆಂಬರ್ 29ರಂದು 22 ಸದಸ್ಯರು ಗದಗ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಬುಧವಾರ 12 ಪುರುಷ ಸದಸ್ಯರು ಮತ್ತು 10 ಮಹಿಳಾ ಸದಸ್ಯರು ಅವಿಶ್ವಾಸದ ಪರ ಮತ ಚಲಾಯಿಸಿದರು. ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಮೊದಲ ಮೂವತ್ತು ತಿಂಗಳ ಅವಧಿ ಗಂಗವ್ವ ಮಜ್ಜಿಗುಡ್ಡ ಅವರು ಅಧ್ಯಕ್ಷರಾಗಿದ್ದರು. ನಂತರ ಸಾಮನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮತ್ತೆ 30 ತಿಂಗಳ ಅವಧಿಗೂ ಸಹ ಅವರೇ ಅಧ್ಯಕ್ಷರಾಗಿ ಮುಂದುವರೆದಿದ್ದರು. ಆದರೆ, ಅವಿಶ್ವಾಸ ಗೊತ್ತುವಳಿಯಾಗುವ ಮೂಲಕ ಕೇವಲ ಒಂದು ವರ್ಷ ಅಧಿಕಾರ ಮಾಡಿದ ನಂತರ ತಮ್ಮ ಸ್ಥಾನವನ್ನು ಕಳೆದುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.