ಸುದ್ದಿ ಸಂಕ್ಷೇಪ
ನಾಳೆ ಫಲಾನುಭವಿಗಳ ಆಯ್ಕೆ
ಮುಂಡರಗಿ: 2013-14ನೇ ಸಾಲಿನಲ್ಲಿ ಮುಂಡರಗಿ ತಾಲೂಕಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಕಾರ್ಯಕ್ರಮದ ತ್ವರಿತ ಮೇವು ಅಭಿವೃದ್ಧಿ ಯೋಜನೆಯಡಿಯಲ್ಲಿ ರೈತರಿಗೆ ಉಚಿತವಾಗಿ ವಿವಿಧ ಸಾಮರ್ಥ್ಯದ ಮೇವು ಕತ್ತರಿಸುವ ಯಂತ್ರಗಳನ್ನು ವಿತರಿಸಲು ಡಿ. 21ರಂದು ಬೆಳಗ್ಗೆ 11 ಗಂಟೆಗೆ ತಹಸೀಲ್ದಾರ್ ಕಚೇರಿಯ ಸಭಾಭವನದಲ್ಲಿ ಫಲಾನುಭವಿಗಳ ಆಯ್ಕೆ ಕಾರ್ಯ ನಡೆಯಲಿದೆ. ಉಚಿತ ಮೇವು ಕೊಯ್ಲು ಉಪಕರಣ ಪಡೆಯಲು ಅರ್ಜಿ ಸಲ್ಲಿಸಿದ ರೈತರನ್ನು ಫಲಾನುಭವಿಗಳ ಆಯ್ಕೆ ಸಮಿತಿಯಲ್ಲಿ ಆಯ್ಕೆಮಾಡಲಾಗುವುದು. ಅರ್ಜಿ ಸಲ್ಲಿಸಿದ್ದ ರೈತ ಬಾಂಧವರು ಫಲಾನುಭವಿ ಆಯ್ಕೆಯ ಪ್ರಕ್ರಿಯೆಯಲ್ಲಿ ಹಾಜರಿರಲು ತಾಲೂಕು ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಸ್.ವಿ. ತಿಗರಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ವಿನಾಶ
ನರೇಗಲ್ಲ: ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಓಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಶೋಕ ಬೇವಿನಕಟ್ಟಿ ಹೇಳಿದರು. ಅವರು ಈಚೆಗೆ ಸ್ಥಳೀಯ ಕೆ.ಎಸ್.ಎಸ್. ಪ್ರೌಢ ಶಾಲೆಯಲ್ಲಿ ನರೇಗಲ್ ಗೃಹ ರಕ್ಷಕದಳ ಘಟಕದವರು ಆಯೋಜಿಸಿದ್ದ ಭೂಮಿ ಒಂದೇ ಭವಿಷ್ಯ ಒಂದೇ ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪರಿಸರದ ಮೂಲಗಳಾಗಿರುವ ಭೂಮಿ, ನೀರು, ವಾತಾವರಣ, ಜೀವಿ ಸಂಕುಲ ಹಾಗೂ ಸ್ವಾಭಾವಿಕ ಸಸ್ಯವರ್ಗಗಳನ್ನು ಅನಿಯಮಿತವಾಗಿ ಬಳಸುತ್ತಿರುವುದು ಮಾನವನಲ್ಲಿನ ದುರಾಸೆಯಿಂದ. ಕೈಗಾರಿಕೆಗಳಿಂದ, ಅನಿಯಮಿತವಾಗಿ ಸಸ್ಯಗಳನ್ನು ಕಡಿಯುವುದರಿಂದಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಿ ವಾತಾವರಣ ಕಲುಷಿತಗೊಂಡು ಮಾನವರಿಗೆ ಅನೇಕ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಬೆಳೆಯುವ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳಾಗುತ್ತವೆ. ನಾವು, ನಮ್ಮ ಭವಿಷ್ಯದ ಕುಡಿಗಳಿಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡುವ ಅಗತ್ಯವಿದೆ ಎಂದರು. ರೋಣ ತಾಲೂಕು ಕಸಾಪ ಅಧ್ಯಕ್ಷ ಡಾ. ಶಿವರಾಜ ಗುರಿಕಾರ ಮಾತನಾಡಿದರು. ಪಪಂ ಸದಸ್ಯ ಕಲ್ಮೇಶ ತೊಂಡಿಹಾಳ ಅಧ್ಯಕ್ಷತೆವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರವೇ ಜಿಲ್ಲಾ ಅಧ್ಯಕ್ಷ ಎಚ್.ಎಸ್. ಅಬ್ಬಿಗೇರಿ, ರಮೇಶ ಕಳಕೊಣ್ಣವರ, ಶಿಕ್ಷಕ ಸಿ.ಕೆ. ಕೇಸರಿ, ಗೃಹರಕ್ಷಕ ದಳ ಅಧಿಕಾರಿ ಎಸ್.ವಿ. ಹಳ್ಳಿಕೇರಿ ಮುಂತಾದವರು ಉಪಸ್ಥಿತರಿದ್ದರು. ಜೆ.ಡಿ. ಬಂಡಿವಡ್ಡರ ಸ್ವಾಗತಿಸಿದರು. ಈರಣ್ಣ ಹಡಪದ ನಿರೂಪಿಸಿದರು. ವೈ.ಎನ್. ಸಾಬಳೆ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

