ಗದಗ

ಸಿಇಟಿ: ಎಬಿವಿಪಿ ಪ್ರತಿಭಟನೆ

Published On :

ಮುಂಡರಗಿ: ವೃತ್ತಿ ಶಿಕ್ಷಣ ಪ್ರವೇಶ 2006ರ ಕಾಯ್ದೆ ಅನುಷ್ಠಾನಕ್ಕೆ ವಿರೋಧಿಸಿ, ಗುರುವಾರ ಎಬಿವಿಪಿ ಕಾರ್ಯಕರ್ತರು ಪಟ್ಟಣದ ಪುರಸಭೆ ಉದ್ಯಾನವನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ, ಬಜಾರ್ ಮೂಲಕವಾಗಿ ಸಂಚರಿಸಿ, ಕೊಪ್ಪಳ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ಸಂಚಾಲಕ ಶಿವು ನಾಡಗೌಡ್ರ ಮಾತನಾಡಿ, ಸರ್ಕಾರವು ಜಾರಿಗೊಳಿಸಲು ಹೊರಟಿರುವ ಈ ಕಾಯ್ದೆಯಿಂದಾಗಿ ಪ್ರಸ್ತುತ ಸರ್ಕಾರಿ ಕೋಟಾದಲ್ಲಿದ್ದು, ಎಂಜಿನಿಯರಿಂಗ್ ಶೇ. 45, ದಂತ ವೈದ್ಯಕೀಯದ ಶೇ. 35 ಸೀಟುಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲಾಗಿದ್ದು, ಯಾವುದೇ ಖಾಸಗಿ ಅನುದಾನ ರಹಿತ ಕಾಲೇಜಿನಲ್ಲಿ ಒಂದೂ ಸರ್ಕಾರಿ ಕೋಟಾದ ಸೀಟುಗಳು ಇಲ್ಲದಂತಾಗಿದೆ. ತನ್ನ ಪಾಲಿನ ಸೀಟುಗಳಿಗಾಗಿ ಕಾಮೇಡ್-ಕೆ ನಡೆಸುವ ಪ್ರವೇಶ ಪರೀಕ್ಷೆಗಳ ಬಗ್ಗೆ ಈಗಾಗಲೇ ಹಲವಾರು ದೂರುಗಳಿದ್ದು, ಈಗ ಸರ್ಕಾರ ಉಳಿದ ಸೀಟುಗಳಿಗೂ ಪರೀಕ್ಷೆ ನಡೆಸಲು ಕಾಮೇಡ್-ಕೆಗೆ ಬಿಟ್ಟು ಕೊಡುತ್ತಿರುವುದು ಖಂಡನೀಯ ಎಂದರು.
ಪುರಸಭೆ ಸದಸ್ಯ ಶಂಕರಗೌಡ ಪಾಟೀಲ್ ಮಾತನಾಡಿ, ಸರ್ಕಾರದ ಈ ಕ್ರಮವನ್ನು ವಿರೋಧಿಸಿದರು. ಪ್ರತಿಭಟನೆಯಲ್ಲಿ ವಿ.ಎನ್. ಪುರದ, ರಿಯಾಜ ತಪ್ಪಡಿ, ಕಿರಣ ಅಂಗಡಿ, ಅರುಣ ತಳವಾರ, ಕೃಷ್ಣ ಗಡಾದ, ಶ್ರೀಧರ ಹಂದ್ರಾಳ, ರಫೀಕ್ ದೊಡ್ಡಮನಿ, ಮೌನೇಶ ಉಪ್ಪಿನಬೆಟಗೇರಿ, ಕನ್ನಡಕ್ರಾಂತಿ ಸೇನೆಯ ಅಧ್ಯಕ್ಷ ಮಂಜುನಾಥ ಮುಧೋಳ, ಕರವೇ ಅಧ್ಯಕ್ಷ ಸಿದ್ಧಪ್ಪ ಮುದ್ಲಾಪುರ, ಪೂಜಾ ಯಾದಗಿರಿ, ಶಾಯಿದಾಬಾನು ನದಾಫ, ಅಶ್ವಿನಿ ರಾಟಿ, ಕಾವೇರಿ ಇಟಗಿ, ಸುಷ್ಮಾ ಕರಡಿ ಮುಂತಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.