ಗದಗ

ಅನುದಾನ ದುರ್ಬಳಕೆ: ನೋಟಿಸ್

Published On :

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಜಿಪಂ ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಅನುದಾನ ದುರಪಯೋಗವಾಗಿರುವ ಕುರಿತು ಮೇಲ್ನೋಟಕ್ಕೆ ಕಂಡುಬಂದಿದ್ದು, ಈ ಕುರಿತು ಸಂಬಂಧಿಸಿದ 4 ಅಧಿಕಾರಿಗಳಿಗೆ ಜಿಪಂ ಸಿಇಒ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆಂದು ಲಕ್ಕುಂಡಿ ಗ್ರಾಮ ಹಿತರಕ್ಷಣಾ ಸಮಿತಿ ಅಧ್ಯಕ್ಷ ದತ್ತಣ್ಣ ಜೋಶಿ ಹೇಳಿದರು.  ಅವರು ಶನಿವಾರ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ಅವರು ನೀಡಿದ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಅನುದಾನದ ದುರ್ಬಳಕೆಯಲ್ಲಿ ಜಿಪಂ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ಚಂಬವ್ವ ಪಾಟೀಲ ಅವರು ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳ ಕೈವಾಡವಿದ್ದು, ಈ ಕುರಿತು ಸಂಪೂರ್ಣ ತನಿಖೆಯಾಗಬೇಕು. ತನಿಖೆ ತೃಪ್ತಿಕರವಾಗದಿದ್ದಲ್ಲಿ ಲೋಕಾಯುಕ್ತ ಬಳಿ ದೂರು ಸಲ್ಲಿಸಲಾಗುವುದು. ಲಕ್ಕುಂಡಿ ಗ್ರಾಮದಲ್ಲಿ ಇದೀಗ ರು. 13.91 ಲಕ್ಷ ಕಾಮಗಾರಿಯ ಅನುದಾನದ ಕುರಿತು ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಕೆಲವು ಕಾಮಗಾರಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಈ ಕುರಿತು ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತರದೇ ಕಾಮಗಾರಿ ಸ್ಥಳಾಂತರ ಮಾಡಿದ್ದಾರೆ. ಕೆಲವು ಕಾಮಗಾರಿ ಕಳಪೆಯಾಗಿ ಮಾಡಿದ್ದಾರೆ ಎಂದು ಆರೋಪಿಸಿದರು. ಅನುದಾನ ದುರ್ಬಳಕೆಯ ಕುರಿತಂತೆ ಜಿಲ್ಲಾ ಪಂಚಾಯಿತಿ ಸಿಇಒ ನೀಡಿರುವ ನೋಟಿಸ್ಗೆ 7 ದಿನಗಳ ಕಾಲಾವಕಾಶ ನೀಡಿದ್ದು, ಬಳಿಕ ಮತ್ತೆ ಇದರ ಉತ್ತರ ಪಡೆಯಲಾಗುವುದು. ತಪ್ಪಿತಸ್ಥರಿಗೆ ಶಿಕ್ಷೆಯಾಗದಿದ್ದಲ್ಲಿ ಹೋರಾಟ ಮುಂದುವರೆಸಲಾಗುವುದು ಎಂದರು. ಸಮಿತಿ ಗೌರವಾಧ್ಯಕ್ಷ ಎಂ.ಎನ್. ಉಮಚಗಿ, ಶರಣಪ್ಪ ಕಮತರ, ರಹೀಮಸಾಬ್ ಕದಡಿ, ಬಸವರಾಜ ಮತ್ತೂರ, ಕೃಷ್ಣಾ ಹಡಗಲಿ, ವಿರೂಪಾಕ್ಷ ಬೆಟಗೇರಿ, ಈರಪ್ಪ ಬಂಡಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.