ಗದಗ

ಮೂಢನಂಬಿಕೆ ವಿರೋಧ ಕಾಯ್ದೆ ಧರ್ಮದ ವಿರುದ್ಧವಲ್ಲ

Published On :

ಗದಗ: ಮೂಢನಂಬಿಕೆ ವಿರುದ್ಧ ರಾಜ್ಯದಲ್ಲಿ ಸರ್ಕಾರ ಜಾರಿಗೊಳಿಸಬೇಕೆಂದಿರುವ ಮೂಢನಂಬಿಕೆ ವಿರೋಧಿ ಕಾಯ್ದೆ ಎಲ್ಲ ಧರ್ಮದಲ್ಲಿರುವ ಧರ್ಮ, ದೇವರ ಹೆಸರಲ್ಲಿನ ಶೋಷಣೆ ವಿರುದ್ಧವೇ ಹೊರತು ಯಾವುದೇ ಧರ್ಮದ ವಿರುದ್ಧವಲ್ಲ ಎಂದು ಜ. ಚನ್ನಮಲ್ಲ ನಿಡುಮಾಮಿಡಿ ಶ್ರೀಗಳು ಹೇಳಿದರು.
ಅವರು ಶುಕ್ರವಾರ ಸಂಜೆ ನಗರದ ಜ. ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  
ಎಲ್ಲ ಧರ್ಮಗಳಲ್ಲಿ ಇಂದಿಗೂ ಆಚರಣೆಯಲ್ಲಿರುವ ಕೆಲ ಮೌಢ್ಯ ಆಚರಣೆ ವಿರುದ್ಧ ಜಾರಿಗೆ ತರಲು ಹೊರಟಿರುವ ಕಾಯ್ದೆ ಕುರಿತು ಕೆಲವರಲ್ಲಿ ತಪ್ಪು ಕಲ್ಪನೆ ಇರುವುದು ವಿಷಾದನೀಯ. ದೇವರ ಪೂಜೆ, ಅರ್ಚನೆ, ಉರುಳುಸೇವೆ, ವೈಯಕ್ತಿಕವಾಗಿ ಹೋಗಿ ಭವಿಷ್ಯ ಕೇಳುವುದು ಮುಂತಾದವುಗಳನ್ನು ನಿಷೇಧಿಸಿ ಎಂದು ಹೇಳಲಾಗಿಲ್ಲ. ಒಬ್ಬ ಮಾನವನ ಗೌರವ ಕಳೆದಿಡುವಂತಹ, ಒಂದು ಪ್ರಾಣಿಯ ಜೀವ ಬಲಿ ಪಡೆಯುವ, ಮುಂತಾದ ಅನಿಷ್ಟ ಆಚರಣೆಗಳು ನಿಲ್ಲಬೇಕೆಂಬ ಸದಾಶಯ ಇದರಲ್ಲಿದೆ ಎಂದರು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಪ್ರಕಾಶ ಕರಿಸೋಮನಗೌಡರ ಅವರಿಂದ ನಿಡುಮಾಮಿಡಿ ಶ್ರೀಗಳನ್ನು ಸನ್ಮಾನಿಸಲಾಯಿತು. ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಹುಬ್ಬಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಸ್.ಎಸ್. ಶೆಟ್ಟರ, ನಿವೃತ್ತ ಪ್ರಾಚಾರ್ಯ ಕೆ.ಎಚ್. ಬೇಲೂರ, ಮೋಹನ ಅಲಮೇಲಕರ ಮುಂತಾದವರು ಉಪಸ್ಥಿತರಿದ್ದರು. ಜ. ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಸ್ವಾಗತಿಸಿದರು. ಬಸವೇಶ್ವರ ಕಾಲೇಜಿನ ಪ್ರಾಚಾರ್ಯ ಬಿ.ಬಿ. ಗೌಡರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.