ಗದಗ

ಜಾತಿವಾರು ಗಣತಿಗೆ ಶೀಘ್ರ ಚಾಲನೆ

Published On :

ಕನ್ನಡಪ್ರಭ ವಾರ್ತೆ, ಗದಗ, ಡಿ. 23
ರಾಜ್ಯದಲ್ಲಿ ಜಾತಿವಾರು ಜನಗಣತಿ ಕಾರ್ಯಕ್ಕೆ ಮುಂಬರುವ ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಚಾಲನೆ ನೀಡಲಿದ್ದು, ಇದರಿಂದ ಎಲ್ಲರಿಗೂ ಸಮಾನನ್ಯಾಯ ಸಿಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.
ಅವರು ಸೋಮವಾರ ನಗರದಲ್ಲಿ ನಡೆಯುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ವೀಕ್ಷಣೆ ಹಾಗೂ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ, ಜಿಲ್ಲಾಡಳಿತ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪ್ರಸಕ್ತ ಸಾಲಿನಿಂದ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಇಲಾಖೆಯ ಅಂಕಿ ಅಂಶಗಳ ಬಗ್ಗೆ ವಿವರಿಸಿದ ಅವರು, ನಗರದ ಹುಬ್ಬಳ್ಳಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ಕಳಪೆಯಾಗಿದ್ದು, ಮರು ದುರಸ್ತಿ ಕೈಗೊಂಡು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಆದೇಶ ನೀಡಿದ್ದೇನೆ.  ಅಂಬೇಡ್ಕರ್ ಭವನ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಕಾಮಗಾರಿಗೆ ಯಾವುದೇ ರೀತಿಯ ಹಣಕಾಸಿನ ಕೊರತೆಯಿಲ್ಲ. ಕಾಮಗಾರಿ ಬೇಗನೇ ಮುಗಿಸಿ, 2014ರ ಅಂತ್ಯಕ್ಕೆ ಪೂರ್ಣಗೊಳಿಸುವ ಕಾಲಮಿತಿ ಯೋಜನೆ ರೂಪಿಸಲಾಗಿದೆ. ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದ್ದು, ಜಾತಿವಾರು ಜನಗಣತಿಯ ನಂತರ ಜನಸಂಖ್ಯೆ ಗನುಗುಣವಾಗಿ ಮೀಸಲಾತಿಯಲ್ಲಿ ಆರ್ಥಿಕ ನೆರವು ಜರುಗುವ ಕಾರಣ ಕ್ರಾಂತಿಕಾರಕ ಬದಲಾವಣೆ  ಸಾಧ್ಯವಾಗಲಿದೆ ಎಂದರು. ಅಪರ ಜಿಲ್ಲಾಧಿಕಾರಿ ನಾಗರಾಜ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.