ಕ್ರೀಡೆಯಿಂದ ಉತ್ತಮ ಆರೋಗ್ಯ: ಸುಮಂಗಲಾ ಜಗ್ಗಲ
ಕನ್ನಡಪ್ರಭ ವಾರ್ತೆ, ಗದಗ, ಡಿ. 24
ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಹೊಂದಲು ಕ್ರೀಡೆ ಸಹಕಾರಿಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಂಗಲಾ ಜಗ್ಗಲ ಹೇಳಿದರು.
ಅವರು ಈಚೆಗೆ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿರುವ ಸೋಮೇಶ್ವರ ಆಟದ ಮೈದಾನದಲ್ಲಿ ಹೊಸವರ್ಷದ ಅಂಗವಾಗಿ ಹಜರತ ಜಿಂದಾಶಾವಲಿ ಗೆಳೆಯರ ಬಳಗದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಿಕ್ಸ-ಏ-ಸೈಡ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಇಂದಿನ ಆದುನಿಕ ದಿನಮಾನಗಳಲ್ಲಿ ಯುವಕರು ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡದೇ ಇರುವುದರಿಂದ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಕ್ರೀಡೆಯು ಮನುಷ್ಯನ ಮನೋಲ್ಲಾಸಕ್ಕೆ, ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಇದರಿಂದ ತಮ್ಮಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಹೊರಹಾಕಲು ಸಾಧ್ಯವಾಗುವುದು. ಗ್ರಾಮದಲ್ಲಿ ಹಜರತ ಜಿಂದಾಶಾವಲಿ ಗೆಳೆಯರ ಬಳಗ ಹಮ್ಮಿಕೊಂಡಿರುವ ಈ ಕ್ರಿಕೆಟ್ ಪಂದ್ಯಾವಳಿಯು ಇತರರಿಗೆ ಮಾದರಿಯಾಗಿದೆ ಎಂದರು. ಉದ್ಘಾಟನೆ ನೆರವೇರಿಸಿದ ಜೀವನ ಅತ್ತಾರ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಕ್ರೀಡೆಗಳು ನಶಿಸುತ್ತಿರುವುದು ನೋವಿನ ಸಂಗತಿ. ವ್ಯಕ್ತಿಯು ಉತ್ತಮ ಆರೋಗ್ಯ ಹೊಂದಬೇಕಾದಲ್ಲಿ ಮಾನಸಿಕ ಹಾಕೂ ದೈಹಿಕ ಚಟುವಟಿಕೆ ನಿರಂತರವಾಗಿ ನಡೆಯುತ್ತಿರಬೇಕು. ಮಾನಸಿಕ ಹಾಗೂ ದೈಹಿಕವಾಗಿ ಸಬಲರಾಗಲು ಹಾಗೂ ಉತ್ತಮ ಆರೋಗ್ಯ ಹೊಂದಲು ಕ್ರಿಡೆ ಅತ್ಯವಶ್ಯಕವಾಗಿದೆ. ಆದರೆ, ಇಂದು ಯುವಕರು ಹೆಚ್ಚಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳದೇ ಇರುವುದು ನೋವಿನ ಸಂಗತಿ. ಅದರಲ್ಲಿಯೂ ವಿಶೇಷವಾಗಿ ಗ್ರಾಮೀಣ ಕ್ರೀಡೆಗಳು ನಶಿಸುತ್ತಿದ್ದು, ಈ ಕುರಿತು ಯುವಕರು ಜಾಗೃತಿ ಹೊಂದಿ, ಕ್ರಿಕೆಟ್ ಕ್ರೀಡೆಯೊಂದಿಗೆ ಗ್ರಾಮೀಣ ಕ್ರೀಡೆಗಳಾದ ಕಬಡ್ಡಿ ಖೋಖೋ, ಕುಸ್ತಿಯಂತಹ ಸ್ಪರ್ಧೆಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸಿ, ಯುವಕರಲ್ಲಿ ಗ್ರಾಮೀಣ ಕ್ರೀಡೆಯ ಕುರಿತು ಜಾಗೃತಿ ಮೂಡಿಸುವಂತೆ ಕೋರಿದರು.ಅತಿಥಿಗಳಾಗಿ ಪಾಲ್ಗೊಂಡಿದ್ದ ಸಂಗಪ್ಪ ಗೋದಿ, ಅಶೋಕ ಇಳಕಲ್ಲ ಹಾಗೂ ಹೇಮಂತ ವಡ್ನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಜರತ ಜಿಂದಾಶಾವಲಿ ಗೆಳೆಯರ ಬಳಗದ ಅಧ್ಯಕ್ಷ ಇಸ್ಮಾಯಿಲ್ ರಾಹುತ್, ಉಪಾಧ್ಯಕ್ಷ ಮಂಜುನಾಥ ಬ್ಯಾಳಿ, ಶಿವು ಹಿರೇಮಠ, ರಾಖೇಶ ಮೌರಿ, ಶರಣಪ್ಪ ಹಕ್ಕಿ, ಮಹೇಶ ಸಂಕನಗೌಡ್ರ, ಸೋಮು ಭಜಂತ್ರಿ, ರವಿ ಅಸೂಟಿ, ಪ್ರಕಾಶ ಭೂಸನೂರಮಠ, ಬಸೀರ ಹಿರೇಹಾಳ, ಶಿವು ಯಲಿಗಾರ, ಮಲ್ಲಪ್ಪ ಜಂತ್ಲಿ, ಮಹ್ಮದರಫೀಕ ಬೂದಿಹಾಳ, ರಿಯಾಜ್ ಬೂದಿಹಾಳ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

