ಗದಗ

ಶಿಕ್ಷಣದಿಂದ ಆದರ್ಶ ಸಮಾಜ ನಿರ್ಮಾಣ

Published On :

ಶಿರಹಟ್ಟಿ: ತಂತ್ರಜ್ಞಾನ ಹಾಗೂ ದೂರದರ್ಶನಗಳ ಪ್ರಭಾವ ಎದುರಿಸಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಆದರ್ಶ ಸಮಾಜ ನಿರ್ಮಾಣ ಮಾಡುವಂತೆ ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಕಮಲವ್ವ ಸಜ್ಜನ ಹೇಳಿದರು.  ಅವರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ನಿಂಗರಡ್ಡಿ ತಿಮ್ಮರಡ್ಡಿ ತಾರಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ 2013-14ನೇ ಸಾಲಿನಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವ್ಯಾಸಂಗ ಮಾಡುವ ವೇಳೆ ವಿದ್ಯಾರ್ಥಿಗಳು ಮೊಬೈಲ್ ದಾಸರಾಗುತ್ತಿದ್ದಾರೆ. ಇದರಿಂದಾಗಿ ತಮ್ಮ ಕಲಿಯುವ ದಿನಗಳಲ್ಲಿ ಪಾಠ-ಆಟದ ಕಡೆ ನಿರ್ಲಕ್ಷ್ಯ ಹೊಂದಿ ವಿದ್ಯಾರ್ಜನೆಯಿಂದ ಹೊರಗುಳಿಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಕಲಿಯುವ ವಯಸ್ಸಿನಲ್ಲಿ ಕಲಿತು ತಮ್ಮ ತಂದೆ-ತಾಯಿಗೆ ಗೌರವ ತರುವಂತ ಕೆಲಸ ಮಾಡುವುದು ಅವಶ್ಯ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಮಾತನಾಡಿದರು. ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಶಿವಪುತ್ರಪ್ಪ ಮಾದರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ಶಂಕರ ಮರಾಠೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಗೌರಮ್ಮ ಕಲ್ಲೇದಾರ, ಸದಸ್ಯ ಮಂಜಪ್ಪ ಸೊರಟೂರ, ತಾಪಂ ಸದಸ್ಯ ಗುಡದಪ್ಪ ಸೊರಟೂರ, ಬಸನಗೌಡ ಪಾಟೀಲ, ರಮೇಶ ಬಡ್ನಿ, ಈರಣ್ಣ ಕೆಲೂರ, ಈರಣ್ಣ ಬನ್ನಿಕೊಪ್ಪ ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕ ಎಲ್.ಆರ್. ಜಯರಾಜ ಸ್ವಾಗತಿಸಿದರು. ಎ.ಎಸ್. ಥೋರಾತ ನಿರೂಪಿಸಿದರು. ಎಸ್.ಎನ್. ದರ್ಜಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.