ಅರಣ್ಯ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆಗೆ ಆದ್ಯತೆ
ಕನ್ನಡಪ್ರಭ ವಾರ್ತೆ, ಗದಗ, ಡಿ. 25
ಅರಣ್ಯ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವ ಕಾಯ್ದೆ ಅನುಷ್ಠಾನವು ಈ ನಡುವೆ ನೆಲಕಚ್ಚಿದ್ದು, ಹೊಸ ಸರ್ಕಾರ ಬಂದ ಮೇಲೆ ಜಾರಿಗೊಳಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಅವರು ಸೋಮವಾರ ತಾಲೂಕಿನ ಮಹಾಲಿಂಗಪುರ ತಾಂಡಾದ 80 ಜನರಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.
ಅಧಿಕಾರಿಗಳು ಕಾನೂನಿನ ಉದ್ದೇಶವನ್ನು ಸರಿಯಾಗಿ ಅರ್ಥಮಾಡಿಕೊಂಡು ಜನಕಲ್ಯಾಣಕ್ಕೆ ಬಳಸಬೇಕು. ಅರಣ್ಯ ಭೂಮಿ ಸಾಗುವಳಿ ಕಾಯ್ದೆ ಕುರಿತು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಿಗೆ ಸದಸ್ಯರಿಗೆ ತರಬೇತಿ ಹಾಗೂ ಜನರಿಗೆ ಮಾಹಿತಿ ನೀಡಲು ಅಧಿಕಾರಿಗಳು ಮುಂದಾಗಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಗ್ರಾಪಂಗೆ 2 ಕೋಟಿ ಅನುದಾನ ವೆಚ್ಚಮಾಡುವ ಅಧಿಕಾರ ನೀಡಲಾಗಿದ್ದು, ಅದರ ಸೂಕ್ತ ಬಳಕೆಯ ಮೂಲಕ ಸ್ವಚ್ಛ ಗ್ರಾಮ, ಶೌಚಾಲಯಗಳುಳ್ಳ ಗ್ರಾಮ ಹಾಗೂ ಸ್ಥಳೀಯ ಕರಕುಶಲ ಕಲೆಯನ್ನು ಹಾಗೂ ಅವಶ್ಯಕ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸುವ ಮುಂತಾದ ಕಾರ್ಯಗಳಿಗೆ ಬಳಸಬೇಕು. ಅಧಿಕಾರಿಗಳು ಕಾಯ್ದೆ ಅಥವಾ ಯೋಜನಾನುಷ್ಠಠಾನ ಮಾಡುವಾಗ ಜನಹಿತ ಹಾಗೂ ನಿಗದಿತ ಅವಧಿಯಲ್ಲಿ ಸೌಲಭ್ಯಗಳನ್ನು ಒದಗಿಸುವ ಸಮಸ್ಯೆಗಳನ್ನು ಬಗೆಹರಿಸುವ ಮುಕ್ತ ಮನಸ್ಸಿನಿಂದ ಕಾರ್ಯ ನಿರ್ವಹಿಸಬೇಕು. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಅವರ 15 ಅಂಶಗಳ ಯೋಜನೆ ಸಂಪೂರ್ಣವಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಗ್ರಾಮ ಪ್ರದೇಶಗಳ ಚಹರೆ ಬದಲಾಗಲಿದೆ ಎಂದರು.
ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಚಿವ ಎಚ್.ಆಂಜನೇಯ ಮಾತನಾಡಿ, ಗ್ರಾಮ ಅರಣ್ಯ ಸಮಿತಿ ಹಾಗೂ ಗ್ರಾಮಸಭೆಗಳು ಈ ಕಾಯ್ದೆಯ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಇದು ಆಂದೋಲನದ ರೂಪದಲ್ಲಿ ಸಂಬಂಧಿತ 16 ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳಬೇಕು. ಈ ಕುರಿತು ವಿಧಾನಸಭಾಧ್ಯಕ್ಷರು ವಿಭಾಗವಾರು ಶಾಸಕರ ಮಾಹಿತಿ ಸಂವಹನ ಸಭೆ ಕರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ, ಶಾಸಕ ಜಿ.ಎಸ್. ಪಾಟೀಲ, ರವೀಂದ್ರ ನಾಯ್ಕ ಮಾತನಾಡಿದರು. ಜಿ.ಕೆ. ಜಮಾದಾರ ನಿರೂಪಿಸಿದರು. ಭೀಮಸಿಂಗ್ ರಾಠೋಡ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

