ಗದಗ

ಮಕ್ಕಳಿಗೆ ಶಿಕ್ಷಣ ಕೊಡಿಸಿ

Published On :

ಶಿರಹಟ್ಟಿ:  ಹಡಪದ ಅಪ್ಪಣ್ಣ ಸಮಾಜ ಬಾಂಧವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಶಿಕ್ಷಣದಲ್ಲಿ ಅಭಿವೃದ್ಧಿ ಸಾಧಿಸಿದರೆ ಸಮಾಜ ತನ್ನಿಂತಾನೆ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಮುಖಂಡ ಸೋಮಣ್ಣ ನಾವಿ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಹಡಪದ ಅಪ್ಪಣ್ಣ ಸಂಘದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಹಿಂದುಳಿದವರ ಹಾಗೂ ಅಲ್ಪ ಸಂಖ್ಯಾತರ ಹಿತರಕ್ಷಣೆಗೆ ಬದ್ಧವಾಗಿದೆ. ಅವರ ಶ್ರೇಯೋಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸಂಘಟಿತರಾಗಿ ಸೌಲಭ್ಯ ಪಡೆಯಲು ಹೋರಾಟ ನಡೆಸೋಣ ಎಂದರು.
ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ನಾಗರಾಜ ಡಂಬಳ ಮಾತನಾಡಿ, ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಸಮಾಜದ ಹಿರಿಯರು ಲಕ್ಷವಹಿಸಬೇಕು. ಶಾಲೆಯಲ್ಲಿ ಕಲಿಸಲಾದ ವಿದ್ಯೆಯನ್ನು ತಿಳಿದು ಸಮಾಜ ಸುಧಾರಣೆಗೆ ಮುಂದಾಗಬೇಕು. ಜನತೆಯಲ್ಲಿ ಅಕ್ಷರದ ಅರಿವು ಮೂಡಿದಾಗ ಮಾತ್ರ ಸಮಾಜದಲ್ಲಿಯ ಮೂಢನಂಬಿಕೆಗಳನ್ನು ತೊಡೆದುಹಾಕಲು ಸಾಧ್ಯ ಎಂದು ಹೇಳಿದರು.
ಸುರೇಶ ಹಡಪದ, ಮಹಾಂತೇಶ ಮಾಗಡಿ, ಶರಣಪ್ಪ ಹಡಪದ, ಮಲ್ಲಿಕಾರ್ಜುನ ಹಡಪದ, ಪ್ರಕಾಶ ನಾವಿ, ತಿಪ್ಪಣ್ಣ ಮಾಗಡಿ, ಬಸಪ್ಪ ಮಾಗಡಿ, ಚನ್ನಪ್ಪ ನಾವಿ, ಬಸವರಾಜ ಹಡಪದ, ದೇವಪ್ಪ ನಾವಿ, ರಮೇಶ ಮಾಗಡಿ, ಯಲ್ಲಪ್ಪ ಮಾಗಡಿ, ಹೊನ್ನಪ್ಪ ಹಡಪದ, ಮಂಜುನಾಥ ನಾವಿ, ಷಣ್ಮುಖಪ್ಪ ಹಡಪದ, ಬಸವರಾಜ ನಾವಿ, ಬಸವರಾಜ ಡಂಬಳ, ರಾಜಶೇಖರ ಹಡಪದ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.
ಯಲ್ಲಪ್ಪ ಹಡಪದ ಸ್ವಾಗತಿಸಿದರು. ಅಶ್ವಿನಿ ಡಂಬಳ ಪ್ರಾರ್ಥಿಸಿದರು. ಯಲ್ಲಪ್ಪ ಮಾಗಡಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.