ಗದಗ

ಜನಸ್ನೇಹಿ ಕೇಂದ್ರಕ್ಕೆ ಮುತ್ತಿಗೆ

Published On :

ಲಕ್ಷ್ಮೇಶ್ವರ: ಪಟ್ಟಣದ ಅಟಲ್‌ಜಿ ಜನಸ್ನೇಹಿ ಕೇಂದ್ರ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ಶುಕ್ರವಾರ ಪಟ್ಟಣದ ನಾಡಕಚೇರಿಗೆ ಮುತ್ತಿಗೆ ಹಾಕಿ ದಿಢೀರ್ ಪ್ರತಿಭಟನೆ ನಡೆಸಿದರು.
ಜನಸ್ನೇಹಿ ಕೇಂದ್ರದ ಕಾರ್ಯವೈಖರಿ ಬಗ್ಗೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಆರ್.ಬಿ. ನಿಂಗನಗೌಡರಿಗೆ ಘೇರಾವ್ ಹಾಕಿದ ಘಟನೆ ಜರುಗಿತು. ಸಾರ್ವಜನಿಕರಿಗೆ ಸರ್ಕಾರಿ ಕಾಗದಪತ್ರಗಳು, ಇನ್ನಿತರ ಅವಶ್ಯಕ ಪ್ರಮಾಣಪತ್ರಗಳು ಶೀಘ್ರವಾಗಿ ದೊರಯಬೇಕು ಎನ್ನುವ ದೃಷ್ಟಿಯಲ್ಲಿ ಸರ್ಕಾರ ಹೋಬಳಿ ಮಟ್ಟದಲ್ಲಿ ಅಟಲ್‌ಜಿ ಜನಸ್ನೇಹಿ ಕೇಂದ್ರಗಳನ್ನು ಪ್ರಾರಂಭ ಮಾಡಿತ್ತು. ಇದರಿಂದ ಜನರಿಗೆ ಸ್ವಲ್ಪ ನೆಮ್ಮದಿ ಮೂಡಿತ್ತು ಎನ್ನಬಹುದು. ಆದರೆ ಪಟ್ಟಣದ ಜನಸ್ನೇಹಿ ಕೇಂದ್ರದ ಸಿಬ್ಬಂದಿ ಬೇಕಾಬಿಟ್ಟಿಯಾಗಿ ವರ್ತನೆ ಮಾಡುತ್ತಿದೆ. ಗ್ರಾಮಾಂತರ ಪ್ರದೇಶದ ಜನರು ನೂರಾರು ರು. ಖರ್ಚು ಮಾಡಿ ಜನಸ್ನೇಹಿ ಕೇಂದ್ರಕ್ಕೆ ಬಂದರೆ 'ನಾಳೆ ಬಾ' ಎನ್ನುವ ಉತ್ತರ ನೀಡುತ್ತಾರೆ. ಸರಿಯಾದ ಸಮಯಕ್ಕೆ ಸಿಗಬೇಕಾದ ಕಾಗದ ಪತ್ರಗಳು ದೊರಯದೆ ಪರದಾಡುವಂತಾಗಿದೆ. ಅಲ್ಲದೆ ಮದ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಯಾವುದೇ ಕಾಗದಪತ್ರಗಳು ಶೀಘ್ರವಾಗಿ ದೊರಯಬೇಕಾದಲ್ಲಿ ಕೈಬೆಚ್ಚಗೆ ಮಾಡಬೇಕು ಎಂದು ಶಿರಹಟ್ಟಿ ತಾಲೂಕು ಕರವೇ ಅಧ್ಯಕ್ಷ ಶರಣು ಗೋಡಿ ಆರೋಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಆರ್.ಬಿ. ನಿಂಗನಗೌಡರ, ಪ್ರಿಂಟರ್ ಕೆಟ್ಟಿದ್ದರಿಂದ ಸಮಸ್ಯೆ ಉಂಟಾಗಿದೆ. ಅದನ್ನು ರಿಪೇರಿ ಮಾಡಿಸಿ, ತ್ವರಿತಗತಿಯಲ್ಲಿ ಕಾಗದಪತ್ರಗಳು ದೊರೆಯುವಂತೆ ಮಾಡಲಾಗುವುದು. ಅಲ್ಲದೇ ಮಧ್ಯವರ್ತಿಗಳ ಹಾವಳಿ ತಡೆಯುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಕರವೇಯ ಅಜ್ಜು ಕೊಂಚಿಗೇರಿಮಠ, ಗಣೇಶ ಕುಂಬಾರ, ನಾಗೇಶ ಅಮರಾಪುರ, ಎಂ.ಎಸ್. ಅಕ್ಕಿ, ತನ್ವೀರ ಮುಳಗುಂದ, ಶಿರಾಜ ಅಹ್ಮದ ಡಾಲಾಯತ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.