ಗದಗ

ಚರಂಡಿ ಅವ್ಯವಸ್ಥೆ: ಪ್ರತಿಭಟನೆ

Published On :

ಗಜೇಂದ್ರಗಡ:  ಸ್ಥಳೀಯ ಪುರಸಭೆ ವ್ಯಾಪ್ತಿಯ ಕುಷ್ಟಗಿ ರಸ್ತೆಗೆ ಹೊಂದಿಕೊಂಡ ಅಂಗಡಿಗಳ ಮುಂದೆ ಸಾರ್ವಜನಿಕರು ಸಂಚರಿಸುವ ರಸ್ತೆ ಬದಿಯ ಚರಂಡಿ ದುರಸ್ತಿ ಮತ್ತು ಸ್ವಚ್ಛತೆಗೆ ಆಗ್ರಹಿಸಿ ವ್ಯಾಪಾರಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚರಂಡಿ ದುರವಸ್ಥೆ ಹೋಗಲಾಡಿಸಲು ಪುರಸಭೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಮನವಿ ನೀಡಿದರೂ ಸ್ಪಂದನೆ ಇಲ್ಲದಂತಾಗಿದೆ. ಇದನ್ನೆಲ್ಲಾ ಗಮನಿಸಿದರೆ ಪುರಸಭೆ ಆಡಳಿತ ಕುಂಭಕರ್ಣ ನಿದ್ರೆಯಲ್ಲಿದೆ ಎಂಬುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ಆರೋಪಿಸಿದರು.
ಹೃದಯ ಭಾಗ ಕಾಲಕಾಲೇಶ್ವರದ ವೃತ್ತ ಬಳಿಯ ರಸ್ತೆಯನ್ನು ಕಳೆದ 2 ವರ್ಷ ಹಿಂದೆ ಅಗಲೀಕರಣ ಮಾಡುವ ಸಂದರ್ಭದಲ್ಲಿ ಮೊದಲಿನ ಗಟಾರ್‌ನ್ನು ಕೆಡವಿ ಹೊಸಗಟಾರು ನಿರ್ಮಿಸುವ ಭರವಸೆ ನೀಡಲಾಗಿತ್ತು. ರಸ್ತೆ ಅಗಲೀಕರಣ ಜತೆ ಡಾಂಬರೀಕರಣ ಮುಗಿದು ವರ್ಷ ಕಳೆದಿದೆ. ಆದರೆ, ರಸ್ತೆ ಬದಿಯ ಗಟಾರು ದುರಸ್ತಿ ಕೈಗೊಂಡಿಲ್ಲ ಎಂದು ದೂರಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ನಿರ್ವಹಣೆ ಇಲ್ಲದೆ ದುರ್ವಾಸನೆ ಬೀರುತ್ತಿರುವ ಚರಂಡಿ ದುರಸ್ತಿ ಜತೆಗೆ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗದಿದ್ದಲ್ಲಿ ಪುರಸಭೆ ಕಚೇರಿ ಮುಂದೆ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಹುಸೇನಸಾಬ ಸಾಂಗ್ಲೀಕಾರ್, ಬಸವರಾಜ ಮೋಹಿತೆ, ಬಾಷೇಸಾಬ್ ಸುಂಕದ, ಅಮೀನಸಾಬ್ ಸಣ್ಣಕ್ಕಿ, ಕಳಕಪ್ಪ ನಿಂಬೋಜಿ, ಅನ್ವರಸಾಬ್ ಸುಂಕದ, ಸುನೀಲ ಬಳಿಗೇರ, ಮಕ್ತುಂ ಮಾರನಬಸರಿ, ಆನಂದ ಕುರಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.