ಅನಧಿಕೃತ ಪವನ ವಿದ್ಯುತ್ ಕಾಮಗಾರಿ ತಡೆಯಿರಿ
ಗದಗ: ಅನಧಿಕೃತ ಪವನ ವಿದ್ಯುತ್ (ಗಾಳಿಯಂತ್ರ) ಕಾಮಗಾರಿಗಳ ನಿಲುಗಡೆಗೆ ಆಗ್ರಹಿಸಿ ತಾಲೂಕು ಪಂಚಾಯಿತಿ ಸದಸ್ಯ ಪ್ರಹ್ಲಾದ್ ಹೊಸಳ್ಳಿ ನೇತೃತ್ವದಲ್ಲಿ ಅಡವಿಸೋಮಾಪುರ ಗ್ರಾಮ ಪಂಚಾಯಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು. ಅಡವಿಸೋಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ಕೃಷಿಯೇತರ ಚಟುವಟಿಕೆಗಳನ್ನು ನಿಲ್ಲಿಸಬೇಕು.
ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ ಜಿಲ್ಲಾ ಕೇಂದ್ರದಿಂದ ಸಮೀಪದಲ್ಲಿರುವ ಸ್ಥಳಗಳಲ್ಲಿ ಈ ರೀತಿ ಅಧಿಕಾರಿಗಳ ಕಣ್ಣ ಎದುರಿನಲ್ಲಿಯೇ ಸರ್ಕಾರಕ್ಕೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಬರಬೇಕಾದ ಲಕ್ಷಾಂತರ ರು.ಗಳ ಆದಾಯ ಬಾರದೆ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಇದೇ ರೀತಿ ಕಳೆದ 2012 ಅಕ್ಟೋಬರ್ 8ರಂದು ಆಗಿನ ಜಿಲ್ಲಾಧಿಕಾರಿಗಳಿಗೆ ಗ್ರಾಪಂ ವತಿಯಿಂದ ಮನವಿ ಸಲ್ಲಿಸಿದ್ದರೂ ಕೂಡಾ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳದೇ ನಿರ್ಲಕ್ಷ್ಯ ತಾಳಿದೆ. ಶೀಘ್ರದಲ್ಲಿಯೇ ಸಂಬಂಧ ಪಟ್ಟವರ ಮೇಲೆ ಸೂಕ್ತ ಕ್ರಮ ಜರುಗಿಸಿ ಸ್ಥಳೀಯ ಸಂಸ್ಥೆಗೆ ಹಾಗೂ ಸರ್ಕಾರಕ್ಕೆ ಬರಬೇಕಾದ ಲಕ್ಷಾಂತರ ರು.ಗಳ ತೆರಿಗೆಯನ್ನು ವಸೂಲಿ ಮಾಡದಿದ್ದರೆ ಜನಪ್ರತಿನಿಧಿಗಳು ಹಾಗೂ ಜನಪರ ಸಂಘ, ಸಂಸ್ಥೆಗಳ ವತಿಯಿಂದ ಹೋರಾಟ ಮಾಡಲಾಗುವುದೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ರಮೇಶ ಲಮಾಣಿ, ಉಪಾಧ್ಯಕ್ಷೆ ನಾಗವ್ವ ಹುಡೇದ, ಸದಸ್ಯರಾದ ಚನ್ನಪ್ಪ ಅಂಗಡಿ, ಮಲ್ಲಪ್ಪ ಹೊಸಳ್ಳಿ, ಶೀತವ್ವ ರಾಠೋಡ, ರಾಮಪ್ಪ ಲಮಾಣಿ, ಕಲ್ಲವ್ವ ತಳವಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

