ಮಕ್ಕಳು ನಾಡಿನ ಹಿರಿಮೆ ಉಳಿಸಿ
ಕನ್ನಡಪ್ರಭ ವಾರ್ತೆ, ಗದಗ, ಡಿ. 29
ವಿದ್ಯಾರ್ಥಿಗಳು ಓದಿನೊಂದಿಗೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ನಾಡಿನ ಹಿರಿಮೆ ಉಳಿಸುವುದರೊಂದಿಗೆ ತಮ್ಮ ಅಮೂಲ್ಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎಸ್. ಗೌಡರ ಹೇಳಿದರು.
ಅವರು ಈಚೆಗೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಯುಕ್ತ ಪಪೂ ಕಾಲೇಜಿನಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದಲ್ಲಿಯೇ ವಿನೂತನವಾಗಿ ಹಮ್ಮಿಕೊಂಡ ಕಾಲೇಜು ಸಾಹಿತ್ಯ ಸಿಂಚನ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದು ನಾವೆಲ್ಲ 21ನೇ ಶತಮಾನದಲ್ಲಿ ಬದುಕುತ್ತಿದ್ದೇವೆ. ಇಂದು ಎಲ್ಲ ಕ್ಷೇತ್ರಗಳಲ್ಲೂ ಟಿವಿ, ಇಂಟರ್ನೆಟ್ ಹಾಗೂ ಮೊಬೈಲ್ಗಳ ಮೂಲಕ ತಂತ್ರಜ್ಞಾನದ ಬಳಕೆ ತೀವ್ರವಾಗಿದೆ.
ತಂತ್ರಜ್ಞಾನವನ್ನು ದೂಷಿಸುವುದರಿಂದ ಏನೂ ಲಾಭವಿಲ್ಲ. ಕೆಲವು ವಿದ್ಯಾರ್ಥಿಗಳು ಈ ಮಾಧ್ಯಮಗಳಿಗೆ ಬಲಿಯಾಗುತ್ತಿದ್ದಾರೆ. ಇದೆ ಮಾಧ್ಯಮಗಳಿಂದ ಸಿಗುವ ಲಾಭವನ್ನು ಧನಾತ್ಮಕವಾಗಿ ಬಳಸಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಸಾಹಿತ್ಯ ವಿದ್ಯಾರ್ಥಿಗಳಿಗೆ ಶಿಸ್ತು ಹಾಗೂ ಅಮೋಘ ಜ್ಞಾನ ಕಲಿಸುತ್ತದೆ. ಸಾಹಿತ್ಯ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯೊಂದಿಗೆ ನಾಗರಿಕ ಸಮಾಜದಲ್ಲಿ ಸುಸಂಸ್ಕೃತ ರೀತಿಯಲ್ಲಿ ಬದುಕುವುದನ್ನು ಕಲಿಸುತ್ತದೆ ಎಂದರು.
ಕಾಲೇಜು ಸಾಹಿತ್ಯ ಸಿಂಚನ ಉದ್ಘಾಟಿಸಿದ ಕನಕದಾಸ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿ ದಂಡಿನ, ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಡಾ. ಶಿವಪ್ಪ ಕುರಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕನ್ನಡ ಭಾಷಾ ಕೌಶಲ್ಯಗಳ ಕುರಿತು ಪಿಪಿಜಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ರಾಜಶೇಖರ ದಾನರೆಡ್ಡಿ ವಿಶೇಷ ಉಪನ್ಯಾಸ ನೀಡಿದರು. ಕನಕದಾಸ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿ ಪ್ರಾ. ಪಿ.ಎಸ್. ಕಾಶಪ್ಪನವರ, ಕೆ.ವಿ.ಎಸ್.ಆರ್. ಕಾಲೇಜಿನ ಪ್ರಾಚಾರ್ಯ ಬಿ.ಆರ್. ಜಾಲಿಹಾಳ, ಜಿ.ಎಂ. ಹಕಾರಿ, ಶರಣು ಗೋಗೇರಿ, ಬಾಹುಬಲಿ ಜೈನರ ಮುಂತಾದವರು ಉಪಸ್ಥಿತರಿದ್ದರು. ಕೆ.ಕೆ. ಹೂಗಾರ ಪ್ರಾರ್ಥಿಸಿದರು. ಜಿ.ಎಂ. ಹಕಾರಿ ಸ್ವಾಗತಿಸಿದರು. ಎಸ್.ಬಿ. ದೊಡ್ಡಣ್ಣವರ ನಿರೂಪಿಸಿದರು. ಡಾ. ಗಣೇಶ ಸುಲ್ತಾನಪುರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

