ಗದಗ

ಜ. 25ರಂದು ರಾಷ್ಟ್ರೀಯಮತದಾರರ ದಿನಾಚರಣೆ

Published On :

ಗದಗ: ರಾಷ್ಟ್ರೀಯ ಮತದಾರರ ದಿನವನ್ನು ಜ. 25ರಂದು ಯಶಸ್ವಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ವಿವಿಧ ಇಲಾಖೆ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಪ್ರೌಢಶಾಲಾ ಮತ್ತು ಕಾಲೇಜು ಮಟ್ಟದಲ್ಲಿ ಮತದಾನದ ಕುರಿತು ಪ್ರಬಂಧ, ಚರ್ಚಾಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಜ. 25ರಂದು ಬಹುಮಾನ ವಿತರಣೆ ಮಾಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಿವಿಧ ಇಲಾಖೆಯ ವಾಹನಗಳಿಗೆ ಮತದಾನದ ಕುರಿತು ಘೋಷಣೆಗಳನ್ನು ಅಂಟಿಸಲು ಕ್ರೋಮೋ ಸ್ಟಿಕರ್ಸ್‌ಗಳನ್ನು ಆಯಾ ಇಲಾಖೆಗಳಿಗೆ ವಿತರಣೆ ಮಾಡಬೇಕು. ಗ್ರಾಪಂ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಬೇಕು. ಉಪನ್ಯಾಸಕರು ಮತದಾನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು ಎಂದರು. ಸಭೆಯಲ್ಲಿ  ಕರಪತ್ರ, ಭಿತ್ತಿ ಪತ್ರ ತಯಾರಿಕೆ, ಆಮಂತ್ರಣ ಪತ್ರಿಕೆ, ಘೋಷಣೆ ತಯಾರಿಸುವ ಕುರಿತು ಚರ್ರ್ಚಿಸಲಾಯಿತು. ಸಭೆಯಲ್ಲಿ ಸಿಇಓ ವೀರಣ್ಣ ತುರಮರಿ, ಡಿವೈಎಸ್‌ಪಿ ವಿಜಯ ಡಂಬಳ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.