ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ
ಗದಗ: ನಗರದ ಮಾಜಿ ಶಾಸಕ ಎಸ್.ವಿ. ಬಿದರೂರ ಕಚೇರಿಯಲ್ಲಿ ಡಿ. 31ರ ಬೆಳಗ್ಗೆ 10.30 ಗಂಟೆಗೆ ಗದಗ ಜಿಲ್ಲಾ ಬಿಜೆಪಿ ಪಕ್ಷದ ರೈತ ಮೋರ್ಚಾದ ಪ್ರಥಮ ಕಾರ್ಯಕಾರಿಣಿ ಸಭೆ ಹಾಗೂ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜಿ.ಬಂಡಿ ನೆರವೇರಿಸುವರು. ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಬಿ.ಎಸ್.ಚಿಂಚಲಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಮಾಜಿ ಸಚಿವ ಸಿ.ಸಿ. ಪಾಟೀಲ, ಮಾಜಿ ಶಾಸಕ ರಾಮಣ್ಣ ಲಮಾಣಿ, ಸಿ.ವಿ. ಬಿದರೂರ, ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಶಿಕಾಂತ ಕುಲಕರ್ಣಿ, ಅಶೋಕ ನವಲಗುಂದ, ಎಂ.ಎಸ್. ಕರಿಗೌಡ್ರ, ಮೋಹನ ಮಾಳಶೆಟ್ಟಿ, ಎಂ.ಎಂ. ಹಿರೇಮಠ ಮುಂತಾದವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ಪ್ರತಿಭಟನೆ
ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾದಿಂದ ಆಸಾರವರೆಗಿನ ಮುಖ್ಯ ಬಜಾರ್ ರಸ್ತೆ ಡಾಂಬರೀಕರಣ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಡಿ. 31ರಂದು ಭಾರತೀಯ ಜನತಾ ಪಕ್ಷದ ವತಿಯಿಂದ ಪಟ್ಟಣದ ಪೇಠೆ ಹನುಮಂತ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪಕ್ಷದ ಎಲ್ಲ ಕಾರ್ಯಕರ್ತರು, ನಾಗರಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಪಕ್ಷದ ನಗರ ಘಟಕದ ಅಧ್ಯಕ್ಷ ಬಸವರಾಜ್ ಆರಳಿ ತಿಳಿಸಿದ್ದಾರೆ.
ಸುನೀಲ ನೇಮಕ
ಶಿರಹಟ್ಟಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ (ಎಚ್. ಶಿವರಾಮೇಗೌಡ) ಶಿರಹಟ್ಟಿ ತಾಲೂಕು ಅಧ್ಯಕ್ಷರನ್ನಾಗಿ ಸುನೀಲ ಪವಾರ ಅವರನ್ನು ನೇಮಕಗೊಳಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಕೆ.ಎಸ್. ಕೊಡತಗೇರಿ ನೇಮಕ ಮಾಡಿ ಆದೇಶ ನೀಡಿದ್ದಾರೆ.
ಕ್ರೀಡಾ ಸಾಧನೆಗೆ ಪರಿಶ್ರಮ ಅವಶ್ಯ: ಕಲಹಾಳ
ಗದಗ: ಕ್ರೀಡಾ ಸಾಧನೆಗೆ ನಿರಂತರ ದೈಹಿಕ ಪರಿಶ್ರಮ ಅಗತ್ಯ. ಕ್ರೀಡೆಗಳು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ, ನಾಯಕತ್ವ ಗುಣ ಬೆಳೆಸಲು ಸಹಕಾರಿ ಎಂದು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎಂ.ಎಂ. ಕಲಹಾಳ ಹೇಳಿದರು. ಅವರು ಈಚೆಗೆ ಸ್ಥಳೀಯ ಸಿದ್ಧಲಿಂಗ ನಗರದ ಬಸವೇಶ್ವರ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2013-14ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ದೈಹಿಕ ಶಿಕ್ಷಕರು ಮಕ್ಕಳ ಕ್ರೀಡಾ ಪ್ರತಿಭೆಯನ್ನು ಪ್ರಾರಂಭದಲ್ಲಿಯೇ ಗುರುತಿಸಿ ತರಬೇತಿ ನೀಡಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಎಸ್.ಬಿ. ಗೌಡರ ಮಾತನಾಡಿ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ಸೋಲೆ ಗೆಲುವಿನ ಸೋಪಾನ. ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಆಟದಲ್ಲಿನ ಗೆಲುವು ಮುಖ್ಯವಲ್ಲ. ಕಾರಣ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡಾಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎಂ.ಎಂ. ಕಲಹಾಳ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಚ್. ಭಜಂತ್ರಿ ಸ್ವಾಗತಿಸಿದರು. ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿಯನ್ನು ಎಂ.ಎಂ. ಕಿರೇಸೂರ ಬೋಧಿಸಿದರು. ಸಹ ಶಿಕ್ಷಕ ಕೆ.ವಿ. ಕೋರಡ್ಡಿ ನಿರೂಪಿಸಿದರು. ಎಂ.ಎಂ. ಕಿರೇಸೂರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

