ಆಸ್ಪತ್ರೆಯಲ್ಲಿ 24 ಗಂಟೆ ಸೇವೆ ನೀಡಿ
ಕನ್ನಡಪ್ರಭ ವಾರ್ತೆ, ಗದಗ, ಡಿ. 30
ಬೆಟಗೇರಿಯ ಶರಣಬಸವೇಶ್ವರ ನಗರದಲ್ಲಿನ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ದಿನದ 24 ಗಂಟೆ ಸೇವೆ ನೀಡುವಂತೆ ಆಗ್ರಹಿಸಿ ಈಚೆಗೆ ಜೆಡಿಎಸ್ ಅಲ್ಪಸಂಖ್ಯಾತರ ಶಹರ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಬೆಟಗೇರಿಯ ಶರಣಬಸವೇಶ್ವರ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ತಪಾಸಣೆ ಮಾತ್ರ ನಡೆಯುತ್ತಿದ್ದು, ಅದು ಸಂಜೆ 4.30ಕ್ಕೆ ಬಂದ್ ಮಾಡಲಾಗುತ್ತಿದೆ. ತುರ್ತು ಚಿಕಿತ್ಸೆ ನೀಡುವ ಸೇವೆ ಮಾತ್ರವಿದ್ದು, ರೋಗಿಯನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡು ಚಿಕಿತ್ಸೆ ನೀಡುವ ವ್ಯವಸ್ಥೆ ಇಲ್ಲ. ಸುಸಜ್ಜಿತ ವ್ಯವಸ್ಥೆ ಹೊಂದಿರುವ ಆಸ್ಪತ್ರೆಗೆ ಸಿಬ್ಬಂದಿ ಕೊರತೆಯಿದೆ. ಸಂಜೆ 4.30ರ ನಂತರ ಯಾವುದೇ ರೋಗಿ ಆಸ್ಪತ್ರೆಗೆ ಹೋಗುವಂತಿಲ್ಲ. ಮಧ್ಯರಾತ್ರಿ ಯಾರಿಗಾದರೂ ಆರೋಗ್ಯ ಏರುಪೇರು ಆದಾಗ ಜಿಲ್ಲಾ ಆಸ್ಪತ್ರೆಗೆ ಹೋಗಬೇಕು. ಜಿಲ್ಲಾಸ್ಪತ್ರೆಯು ಬೆಟಗೇರಿಯಿಂದ ಸುಮಾರು 12 ಕಿ.ಮೀ. ಇದ್ದು ತುರ್ತುಚಿಕಿತ್ಸೆ ಬೇಕಾಗುವಂತಹ ರೋಗಿಗಳು ಮಾರ್ಗಮಧ್ಯೆಯೇ ಮೃತರಾಗುವಂತಹ ಸ್ಥಿತಿ ಎದುರಾಗಿದೆ.
ಸಾಮಾನ್ಯ ಜನರು ಜೀವ ರಕ್ಷಣೆ ಮಾಡಿಕೊಳ್ಳಲು ಅನುವು ಮಾಡಿಕೊಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಈ ಭಾಗದ ಜನರೊಂದಿಗೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ವಿಷ್ಣುಸಾ ಅರವಟಗಿ, ಅಬ್ದುಲ್ ನರಸಾಪುರ, ರಫೀಕ ಹಳೇಮಸೂತಿ, ಇಸ್ಮಾಯಿಲ್ ನರಸಾಪುರ, ಪ್ರಭುಗೌಡ ಪಾಟೀಲ, ರಾಜು ರೊಟ್ಟಿ, ರಫೀಕ ನರಗುಂದ, ಖಾದರ ನರಗುಂದ, ಕಿರಣ ಹಿಡ್ಕಿಮಠ, ಗರಿಬ ನರಗುಂದ, ರಾಜೇಸಾಬ ನಾಯ್ಕರ, ಭೀಮಪ್ಪ ಹದ್ದಣ್ಣವರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

