ಗದಗ

ಟ್ರ್ಯಾಕ್ಟರ್ ಹಾಯ್ದು ಬಾಲಕ ಸಾವು

Published On :


ನರಗುಂದ: ಪಟ್ಟಣದ ಸವದತ್ತಿ ಕನಕ ವೃತ್ತದ ಬಳಿ ಶುಕ್ರವಾರ ಬೆಳಗಿನ ಜಾವ ಮುನವಳ್ಳಿ ಶುಗರ್ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಜರುಗಿದೆ. ಮೃತನನ್ನು ಲಾಡಸಾಬ್ ನಾಯ್ಕರ್ (12)  ಎಂದು ಗುರುತಿಸಲಾಗಿದೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ: ಬೈಕ್ ಸವಾರ ಸಾವು
ನರಗುಂದ: ನರಗುಂದದಿಂದ ಕೊಂಗವಾಡ ತೆರಳುವ ರಸ್ತೆಯಲ್ಲಿ ಬೈಕ್ ಸವಾರನಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ  ಬೈಕ್ ಸವಾರ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮೃತನನ್ನು ಗೋಪಾಲ ಪೂಜಾರ (30) ಎಂದು ಗುರುತಿಸಲಾಗಿದೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  
ಟೆಂಪೊ ಹಾಯ್ದು ಮಗು ಸಾವು
ಲಕ್ಷ್ಮೇಶ್ವರ: ಪಟ್ಟಣದ ರವಿ ಚಿತ್ರಮಂದಿರದ ಬಳಿ ಧನಲಕ್ಷ್ಮೀ ಬಸವರಾಜ ಮೇದಾರ ಎನ್ನುವ ಒಂದುವರೆ ವರ್ಷದ ಮಗುವಿನ ಮೇಲೆ ಟೆಂಪೊ ಹಾಯ್ದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಜರುಗಿದೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.