ಗದಗ

ಘನ ತ್ಯಾಜ್ಯ: ಸಮುದಾಯದ ಪಾತ್ರ ಪ್ರಮುಖ

Published On :




ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಫೆ. 1
ಜೀವ ಸಂಕುಲಕ್ಕೆ ಮಾರಕವಾಗುವ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆಯಲ್ಲಿ ಸ್ಥಳೀಯ ಆಡಳಿತದ ಜತೆಗೆ ಜನ ಸಮುದಾಯದ ಪಾತ್ರವೂ ಪ್ರಮುಖ ಎಂದು ಆರೋಗ್ಯಾಧಿಕಾರಿ ವ್ಹಿ.ಡಿ. ಬೆನ್ನೂರ ಹೇಳಿದರು.
ಅವರು ಗುರುವಾರ ಸ್ಥಳೀಯ ಸರ್ಕಾರಿ ಮಾದರಿಯ ಕೇಂದ್ರ ಶಾಲಾ ನಂ.1ರ ಶಾಲಾ ಆವರಣದಲ್ಲಿ ಪುರಸಭೆ ಹಾಗೂ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ವಿಜ್ಞಾನ ಕೇಂದ್ರ ವತಿಯಿಂದ ನಡೆದ ಘನತ್ಯಾಜ್ಯ ವಿಲೇವಾರಿ ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಲಾ ಮಕ್ಕಳಲ್ಲಿಯೂ ಪರಿಸರ ಸಂರಕ್ಷಣೆ ಹಾಗೂ ಜಾಗೃತಿ ಮೂಡಿಸುವುದು ಅವಶ್ಯ ವಿದ್ಯಾರ್ಥಿಗಳು ತಮ್ಮ ಸುತ್ತ ಮುತ್ತಲಿನ ಪರಿಸರ ಸಂರಕ್ಷಣೆಯ ಬಗ್ಗೆ ಕಾಳಜಿ ವಹಿಸಬೇಕೆಂದರು.   ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ ನಿಡಶೇಸಿ ಮಾತನಾಡಿ, ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತು ಪುರಸಭೆ ವತಿಯಿಂದ ಕಳೆದ 5 ವರ್ಷಗಳಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು.
ಶಾಲಾ ವಿದ್ಯಾರ್ಥಿಗಳಾದ ಪ್ರಕಾಶ ಬೆಳವಣಕಿ, ಐಶ್ವರ್ಯ ಚಿಲಕಾ ಮಾತನಾಡಿದರು. ಪುರಸಭೆ ಅಧ್ಯಕ್ಷೆ ದೇವಕ್ಕ ಬೆಳವಣಕಿ, ಉಪಾಧ್ಯಕ್ಷ ಭಾಸ್ಕರ ರಾಯಬಾಗಿ ಮುಖ್ಯೋಪಾಧ್ಯಾಯ ಎಲ್.ಕೆ ರಾಠೋಡ, ಪುರಸಭೆ ಯೋಜನಾಧಿಕಾರಿ ಕೆ.ಓ. ಮುಲ್ಲಾ, ಬಿ.ಎಸ್. ಬಳಗಾನೂರ, ಆರೋಗ್ಯ ಇಲಾಖೆಯ ಎಂ.ಬಿ. ಗಡ್ಡಿ, ಅಗಸ್ತ್ಯ ಪ್ರತಿಷ್ಠಾನದ ಮುಖ್ಯಸ್ಥ ಸಂತೋಷಕುಮಾರ ಬಿ. ಶಿವಾನಂದ ಮ್ಯಾಗೇರಿ, ಮಲ್ಲಿಕಾರ್ಜುನ ಆಲೂರ, ಯಲ್ಲನಗೌಡ, ಆಂಜನೇಯ, ನಾಗೇಶ, ಇನ್ನಿತರರು ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಪುರಸಭೆ ಆವರಣದಿಂದ ವಿವಿಧ ಶಾಲಾ ಮಕ್ಕಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಆಂದೋಲನ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.