ಶಿಕ್ಷಕರೇ ನಾಡಿನ ಅಭಿವೃದ್ಧಿ ಹರಿಕಾರರು
ಕನ್ನಡಪ್ರಭ ವಾರ್ತೆ, ಗದಗ, ಫೆ. 2
ಶಿಕ್ಷಕರೇ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದು, ಅವರಿಂದಲೇ ದೇಶದ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಶನಿವಾರ ನಗರದ ಕನಕ ಭವನದಲ್ಲಿ ಗದಗ ಗ್ರಾಮೀಣ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಜರುಗಿದ ಗದಗ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರಿಗೆ ಹಾಗೂ ಶಿಕ್ಷಣಕ್ಕೆ ತುಂಬಾ ಪ್ರಾಶಸ್ತ್ಯ ನೀಡಲಾಗುತ್ತಿದೆ. ಭಾರತದಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳೆಂದರೆ ಪಾಲಕರು ಮೂಗು ಮುರಿಯುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಪ್ರತಿಷ್ಠಿತ ಶಾಲೆಗಳೆಂದು ಸಮಾಜ ಹಾಗೂ ಪಾಲಕರು ಗುರುತಿಸುವಂತೆ ಶಿಕ್ಷಕರು ಶ್ರಮಿಸಬೇಕು. ಶಿಕ್ಷಕರ ಸಮಸ್ಯೆಗಳಿಗೆ ನಮ್ಮ ಸರ್ಕಾರ ಸ್ಪಂದಿಸುತ್ತಿದೆ. ಪ್ರತಿ ತಾಲೂಕುಗಳಲ್ಲಿಯೂ ಶಿಕ್ಷಕ ಸಂಘಟನೆಗಳು ಸಂಘಟಿತರಾಗಿ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಪ್ರಯತ್ನಿಸಬೇಕೆಂದರು. ಜ್ಞಾನಸ್ಫೂರ್ತಿ ಎಂಬ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಶಾಸಕ ಶ್ರೀಶೈಲಪ್ಪ ಬಿದರೂರ, ಸಮಾಜವನ್ನು ಹಸನುಗೊಳಿಸುವ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಶಿಕ್ಷಕರು ಒಂದು ತರಬೇತಿ ಪಡೆದು ಶಿಕ್ಷಕ ವೃತ್ತಿಯಲ್ಲಿದ್ದರೆ ಸಾಲದು, ನಿತ್ಯ ವಿದ್ಯಾರ್ಥಿಯಾಗಿ ಅಧ್ಯಯನ ಶೀಲತೆಯನ್ನು ಬೆಳೆಸಿಕೊಳ್ಳಬೇಕೆಂದರು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ, ಆಧುನಿಕ ಶಿಕ್ಷಣದ ವ್ಯವಸ್ಥೆಗೆ ಹೊಂದಿಕೊಳ್ಳುವ ಪರಿಣಿತಿಯನ್ನು ಶಿಕ್ಷಕರು ರೂಡಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆಯನ್ನು ಗದಗ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಸ್. ತಳವಾರ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಮಾರಂಭದ ಸಾನ್ನಿಧ್ಯವನ್ನು ನಂದಿವೇರಿ ಮಠದ ಶಿವಕುಮಾರ ಶ್ರೀಗಳು ವಹಿಸಿದ್ದರು. ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾಪಂ ಅಧ್ಯಕ್ಷ ಎ.ಎಸ್. ಕರೂರ, ಸಂಘದ ರಾಜಾಧ್ಯಕ್ಷ ಬಸವರಾಜ ಗುರಿಕಾರ, ವಿ.ಎಂ. ನಾರಾಯಣಸ್ವಾಮಿ, ಡಾ. ಶಿವಪ್ಪ ಕುರಿ, ಡಿಡಿಪಿಐ ರಾಜೀವ ನಾಯಕ, ಹಾಗೂ ಗದಗ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಿಕ್ಷಕರು ಪಾಲ್ಗೊಂಡಿದ್ದರು. ಬಿ.ಬಿ. ಹಡಪದ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಎಚ್. ಪೂಜಾರ ಸ್ವಾಗತಿಸಿದರು. ಬಿ.ವೈ. ಡೊಳ್ಳಿನ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

