ತಹಸೀಲ್ದಾರ್ ಕಚೇರಿ ಕಳ್ಳತನ
ಗದಗ: ಗದಗ ತಹಸೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಯೋರ್ವ 2 ಜತೆ ಕಂಪ್ಯೂಟರ್ ಕಳ್ಳತನ ಮಾಡಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕದಡಿ ಗ್ರಾಮ ಪಂಚಾಯ್ತಿಯ ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ ಬಾರಕೇರ ಎನ್ನುವವನೇ ಕಂಪ್ಯೂಟರ್ ಕಳ್ಳತನ ಮಾಡಿರುವ ಆರೋಪಿಯಾಗಿದ್ದು, ತನಗೆ ಬೇಕಾಗಿದ್ದ ಕೆಲವು ಅಗತ್ಯ ದಾಖಲೆಗಳ ಸಲುವಾಗಿ ಕೃತ್ಯ ಮಾಡಿದ್ದಾನೆ ಎನ್ನಲಾಗಿದೆ. ಘಟನೆ ನಡೆದ 12 ಗಂಟೆಯೊಳಗೆ ಗದಗ ಶಹರ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆ ನೇತೃತ್ವವನ್ನು ಸಿಪಿಐ ಸಂತೋಷ್ ಪವಾರ್ ವಹಿಸಿದ್ದರು. ಆರೋಪಿಯನ್ನು ಬಂಧಿಸಲಾಗಿದೆ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀರು ಪೂರೈಕೆ ಮಾಹಿತಿ
ಗದಗ: ನಗರದ ಎಸ್.ಎಂ.ಕೃಷ್ಣ ನಗರ, ಆಟೋ ಕಾಲೋನಿ 1ನೇ ಮತ್ತು 2ನೇ ಬ್ಯಾಚ್, ಕುಂಬಾರ ಓಣಿಯಿಂದ ರಾಜಾಜಿ ರೋಡ್ವರೆಗೆ, ಶರಣಬಸವೇಶ್ವರ ಗುಡಿ ಲೈನ್, ಕಬಾಡಿ ಲೈನ್, ಬೆಟಗೇರಿ ಕಿಲ್ಲಾ ಈ ಭಾಗಗಳಲ್ಲಿ ಸೋಮವಾರ ತುಂಗಭದ್ರಾ ನದಿ ನೀರು ಪೂರೈಕೆ ಮಾಡಲಾಗುವುದು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

