ಗದಗ

5ನೇ ಹಂತದ ಸುವರ್ಣ ಗ್ರಾಮ ಯೋಜನೆ

Published On :

ಗದಗ:  ನರಗುಂದ ವಿಧಾನಸಭಾ ಕ್ಷೇತ್ರದ ಗದಗ ತಾಲೂಕಿನ ಹೊಂಬಳ ಗ್ರಾಮದಲ್ಲಿ ಈಚೆಗೆ 5ನೇ ಹಂತದ ಸುವರ್ಣ ಗ್ರಾಮೋದಯ ಅಂದಾಜು ಮೊತ್ತ ರು. 181 ಲಕ್ಷಗಳ ಕಾಮಗಾರಿಯ ಭೂಮಿಯ ಪೂಜೆಯನ್ನು ಶಾಸಕ ಸಿ.ಸಿ. ಪಾಟೀಲ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ರೇಣುಕಾ ಪರಸಪ್ಪನವರ, ಉಪಾಧ್ಯಕ್ಷೆ ರತ್ನವ ಲಕ್ಕುಂಡಿ, ಯಲ್ಲಪ್ಪ ಪದ್ಮಣ್ಣವರ, ಈರಪ್ಪ ಸೂಡಿ, ದಸ್ತಗೀರಸಾಬ ಬಾಪಣ್ಣವರ, ಬಸುರಾಜ ಹುಣಸಿಮರದ, ಹಿರೇಮಠ ಶೇಖಪ್ಪ ಹಡಗಲಿ, ಗ್ರಾ. ಪಂ. ಸದಸ್ಯರುಗಳು, ಕೆಆರ್‌ಐಡಿಎಲ್ ಅಧಿಕಾರಿಗಳು, ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.
ಸಮಾರೋಪಕ್ಕೆ ತೋಂಟದ ಶ್ರೀಗಳು
ಗದಗ:  ಫೆ 9, 10 ಹಾಗೂ 11ರಂದು ಬಿಜಾಪುರದಲ್ಲಿ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ 11ರಂದು ಸಂಜೆ 4.30ಕ್ಕೆ ಜರುಗುವ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕನ್ನಡದ ಜಗದ್ಗುರು, ಪುಸ್ತಕ ಸ್ವಾಮೀಜಿ ಎಂದೇ ಖ್ಯಾತರಾಗಿರುವ ಗದುಗಿನ ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರು ಶುಭನುಡಿ ಹೇಳುವರು ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಡಾ. ಶಿವಪ್ಪ ಕುರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.