ಗೋಟಗೊಡಿ ಕೆರೆ ಅಭಿವೃದ್ಧಿಗೆ ರು. ಕೋಟಿ
ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಫೆ. 3
ಗೋಟಗೊಡಿ ಕೆರೆ ಅಭಿವೃದ್ಧಿಗೆ ರು. 1 ಕೋಟಿ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಕೆರೆ ಭೂಮಾಪನ ಮಾಡಲಾಗುತ್ತಿದ್ದು, ಅದರ ಸರ್ವತೋಮುಖ ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಮಾಡವುದಾಗಿ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕಿನ ಗೋಟಗೊಡಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ರು. 15 ಲಕ್ಷ ವೆಚ್ಚದ ಟ್ಯಾಂಕ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಗೋಟಗೊಡಿ ಕೆರೆ ಕಾಮಗಾರಿ ಹಾಗೂ ಸೌಂದರ್ಯೀಕರಣಗೊಳಿಸಲಾಗುವುದು. ಕೆರೆ ಅಭಿವೃದ್ಧಿ ಸುತ್ತಮುತ್ತಲಿನ ಗ್ರಾಮಸ್ಥರ ಬೇಡಿಕೆಯಾಗಿತ್ತು. ಗೋಟಗೊಡಿ ಗ್ರಾಮಕ್ಕೆ ಹತ್ತು ಹಲವು ಯೋಜನೆಗಳನ್ನು ಮಂಜೂರು ಮಾಡಿ ಅಭಿವೃದ್ಧಿ ಮಾಡಲಾಗಿದ್ದು, ಇನ್ನು ಗ್ರಾಮದೇವತೆ ಹಾಗೂ ಸಮುದಾಯ ಭವನಕ್ಕೂ ಸದ್ಯದಲ್ಲೇ ಚಾಲನೆ ನೀಡಲಾಗುವದು ಎಂದು ಭರವಸೆ ನೀಡಿದರು.
ಗ್ರಾಮದ ಹಿಂದುಳಿದ ತಾಲೂಕಿಗೆ ಹೆಗ್ಗಳಿಕೆಯಾಗಿದ್ದ ಕ್ಷೇತ್ರದ ಅಭಿವೃದ್ಧಿ, ಶಿಕ್ಷಣ, ಕುಡಿಯುವ ನೀರು, ರಸ್ತೆ, ಆರೋಗ್ಯ ಸೇರಿದಂತೆ ಇನ್ನೂ ಹತ್ತು ಹಲವಾರು ಕಾಮಗಾರಿಗಳಿಗೆ ಅನುದಾನ ನೀಡಿರುವುದಾಗಿ ಅವರು ಹೇಳಿದರು.
ವನಹಳ್ಳಿ ಗ್ರಾಪಂ ಅಧ್ಯಕ್ಷೆ ದ್ಯಾಮವ್ವ ವಡ್ಡರ ಅಧ್ಯಕ್ಷತೆ ವಹಿಸಿದ್ದರು.
ತಾಪಂ ಅಧ್ಯಕ್ಷೆ ಉಷಾ ಶಿವಾನಂದ ಬಿಳೆಕುದರಿ, ಮಾಜಿ ಅಧ್ಯಕ್ಷ ಶಿದ್ಲಿಂಗಪ್ಪ ಕಾರಡಗಿ, ಜಿಪಂ ಸದಸ್ಯೆ ಸರೋಜಾ ಆಡೀನ, ತಾಪಂ ಸದಸ್ಯರಾದ ನಿಂಗಣ್ಣ ಹರಿಜನ, ಬಿಜೆಪಿ ತಾಲೂಕು ಅಧ್ಯಕ್ಷ ದೇವಣ್ಣಾ ಚಾಕಲಬ್ಬಿ, ಎಪಿಎಂಸಿ ಸದಸ್ಯ ಮಲ್ಲಿಕಾರ್ಜುನಗೌಡ ಪಾಟೀಲ, ದುಂಡಶಿ ಗ್ರಾಪಂ ಅಧ್ಯಕ್ಷ ವೀರಣ್ಣ ಮಹಜನಶೆಟ್ಟರ, ಮಾಜಿ ಅಧ್ಯಕ್ಷ ಎ.ಪಿ. ಮುಲ್ಲಾ, ವನಹಳ್ಳಿ ಗ್ರಾಪಂ ಸದಸ್ಯರಾದ ಯಲ್ಲಪ್ಪ ಶಿಂಧ್ಯಾ, ಬಸವಂತೆವ್ವ ಅಮ್ಮಿನಬಾವಿ, ಸುಭಾಸ ಸಂಕ್ರಣ್ಣವರ, ಮಡಿವಾಳಯ್ಯ ಹಿರೇಮಠ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇವೇಳೆ, ವಿವಿಧ ಗಣ್ಯರನ್ನು ಸನ್ಮಾನಿಸಲಾಯಿತು.
ಹನುಮಂತಪ್ಪ ಗುಳೇದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

