ಬಜೆಟ್ನಲ್ಲಿ ನೀರಾವರಿಗೆ ಆದ್ಯತೆ: ಬೊಮ್ಮಾಯಿ
ಶಿಗ್ಗಾಂವಿ: ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಫೆ. 8ರಂದು ಬಜೆಟ್ ಮಂಡನೆಯಾಗಲಿದ್ದು, ಜಲಸಂಪನ್ಮೂಲ ಇಲಾಖೆಯಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನೀರಾವರಿಗೆ ಹೆಚ್ಚಿನ ಒತ್ತು ಕೊಡುವ ನಿಟ್ಟಿನಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ 9 ಯೋಜನೆಯಲ್ಲಿ ಈಗಾಗಲೇ 6 ಯೋಜನೆಗಳನ್ನು ಪ್ರಾರಂಭಿಸಿದ್ದು, ಅವುಗಳಿಗೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು.
ನಿಮ್ಮ ನಡೆ ಯಾವ ಕಡೆಗೆ ಎಂದು ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ ನನ್ನ ಬಗ್ಗೆ ಹಲವಾರು ಉಹಾಪೋಹಗಳು ಎದ್ದಿವೆ. ಅದಕ್ಕೆ ನಾನು ಉತ್ತರ ನೀಡಲ್ಲ ಎಂದ ಬೊಮ್ಮಾಯಿ ಬಿಜೆಪಿ ಸಚಿವನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಇದೇ ಪಕ್ಷದಲ್ಲಿಯೇ ಉಳಿಯುತ್ತೇನೆ ಎಂದು ಹಾರಿಕೆ ಉತ್ತರ ನೀಡಿದರು.
ಮಲ್ಟಿಸ್ಕೀಲ್ ಐಟಿಐ ಕಾಲೇಜುಗಳಿಗೆ ರು. 250 ಕೋಟಿ ಹಣ ಮಂಜೂರು ಮಾಡಲಾಗಿದೆ. ಅದರಲ್ಲಿ ಸವಣೂರಿಗೆ ರು. 3 ಕೋಟಿ ಅನುದಾನ ಮಂಜೂರಾಗಿದ್ದು, ಮೊದಲನೇ ಹಂತದಲ್ಲಿ ಒಂದು ಕೋಟಿ ಬಿಡುಗಡೆ ಮಾಡಲಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಪ್ರಸ್ತುತ ವರ್ಷದಲ್ಲಿ ಕಾರ್ಯಾರಂಭ ಮಾಡಲಾಗುವುದು ಎಂದರು.
ಶಿಗ್ಗಾಂವ-ಸವಣೂರು ತಾಲೂಕುಗಳಿಗೆ ಎರಡು ತಾಂತ್ರಿಕ ವಿದ್ಯಾಲಯಗಳನ್ನು ಮಂಜೂರು ಮಾಡಲಾಗಿದೆ. ರು. 10 ಕೋಟಿ ವೆಚ್ಚದಲ್ಲಿ ಅಟಲ ಬಿಹಾರಿ ವಾಜಪೇಯಿ ವಸತಿ ಶಾಲೆ ಮಂಜೂರಾಗಿದೆ. ಸುಮಾರು 20 ಎಕರೆ ಭೂಮಿ ಸಿಗುವಂತಹ ಸ್ಥಳದಲ್ಲಿ ಪ್ರಸಕ್ತ ವರ್ಷ ಶಾಲೆ ಪ್ರಾರಂಭಿಸಲಾಗುವುದು. ವಾಲ್ಮೀಕಿ ಸಮುದಾಯ ಭವನಕ್ಕೆ ರು. 1 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

