ವಿದ್ಯಾರ್ಥಿಗಳಿಗೆ ಸಮಾಜದ ಬಗ್ಗೆ ಅರಿವಿರಬೇಕು: ಅಜ್ಜುಗೌಡ
ನರಗುಂದ: ಕಾಲೇಜ್ಗೆ ಬಂದ ತಕ್ಷಣ ಮಜಾ ಮಾಡಬೇಕೆಂದು ಕೆಲವು ವಿದ್ಯಾರ್ಥಿಗಳು ಮುಂದಾಗುವರು. ಇದರಿಂದ ಮುಂದಿನ ದಿನದಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳುವುದು ಕಷ್ಟವಾಗುತ್ತದೆಂದು ಮುಖಂಡ ಅಜ್ಜುಗೌಡ ಪಾಟೀಲ ಹೇಳಿದರು.
ಅವರು ಈಚೆಗೆ ತಾಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಎಸ್.ಎಸ್.ಎಸ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದೊರಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಮಾತನಾಡಿ, ಉತ್ತಮ ಸಮಾಜ ನಿರ್ಮಾಣ ಆಗಬೇಕೆಂದರೆ ಯುವಕರ ಪಾತ್ರ ಬಹಳ ದೊಡ್ಡದಾಗಿದ್ದು, ಅದಕ್ಕೆ ತಾವುಗಳು ಕಲಿಕೆ ಜತೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಕ, ಕಲೆ ಸಾಹಿತ್ಯಗಳ ಬಗ್ಗೆ ಹೆಚ್ಚು ಒತ್ತು ಕೊಟ್ಟು ಇವುಗಳ ಬಗ್ಗೆ ತಿಳಿವಳಕೆ ಪಡೆದುಕೊಳ್ಳವುದು ಅವಶ್ಯ ಎಂದರು.
ಈ ಸಂದರ್ಭ ಹನುಮಂತಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಚ್. ಮಾದರ, ಎಸ್.ಎನ್. ಪೂಜಾರ, ಡಿ.ಆರ್. ಕಲಬುರ್ಗಿ ಹಾಜರಿದ್ದರು. ಎಸ್.ಕೆ. ಜೋಗಿ ಸ್ವಾಗತಿಸಿದರು. ಜಿ.ಜಿ. ಹುಬ್ಬಳ್ಳಿ ನಿರೂಪಿಸಿದರು. ಕೆ.ಆರ್. ನದಾಫ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

