ಗದಗ

ಗಜೇಂದ್ರಗಡ ಗ್ರಾಮೀಣ ಸಾರಿಗೆ ಆರಂಭಿಸಲು ಸಚಿವ ಬಂಡಿ ಸೂಚನೆ

Published On :

ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಫೆ. 4
ಗಜೇಂದ್ರಗಡ ವಾ.ಕ.ರ.ಸಾ ಸಂಸ್ಥೆ ಘಟಕದಿಂದ ಗ್ರಾಮೀಣ ಸಾರಿಗೆ ಆರಂಭಿಸುವುದರ ಜತೆಗೆ ಅಂತರ್ ರಾಜ್ಯಗಳಿಗೂ ಬಸ್ ಸೌಕರ್ಯ ಕಲ್ಪಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಭಾನುವಾರ ಪಟ್ಟಣದ ಬಸ್ ನಿಲ್ದಾಣ ಬಳಿ ನಿರ್ಮಿಸಿದ ನೂತನ ವಾಣಿಜ್ಯ ಮಳಿಗೆಗಳ ಹಾಗೂ ನಿಲ್ದಾಣದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು. ಸಾರಿಗೆ ಸಂಸ್ಥೆಯಲ್ಲಿ ಗಜೇಂದ್ರಗಡ ಮತ್ತು ಲಕ್ಷ್ಮೇಶ್ವರ ಘಟಕಗಳು ಲಾಭದಲ್ಲಿದ್ದು, ಸಂತಸ ತಂದಿದೆ. ಸಂಸ್ಥೆಯ ನೌಕರಿಗೆ ಸೂಕ್ತ ಸೇವಾ ಭದ್ರತೆ ನೀಡಲು ಮುಂದಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವಾಕರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಎಂ.ಎಸ್. ಕರಿಗೌಡ್ರ ಮಾತನಾಡಿ, ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 22 ಸಾವಿರ ನೌಕರರು ಸೇವೆ ಸಲ್ಲಿಸುತ್ತಿದ್ದು, 5 ಸಾವಿರ ಬಸ್ಸುಗಳು ನಿತ್ಯ 90 ಲಕ್ಷ ಪ್ರಯಾಣಿಕರ ಸೇವೆ ಮಾಡುತ್ತಿವೆ. ಸರ್ಕಾರ ಹೊಸ ಬಸ್ ಖರೀದಿಗಾಗಿ ರು. 50 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ 30 ಹೊಸ ಹವಾ ನಿಯಂತ್ರಿತ ಮತ್ತು 150 ಸಾಮಾನ್ಯ ದರ್ಜೆಯ ಬಸ್ ಜತೆ ಮಿನಿಬಸ್ ಖರೀದಿಯ ಯೋಜನೆ ರೂಪಿಸಲಾಗಿದೆ. ಅಲ್ಲದೇ ನರೇಗಲ್ಲ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆರಿಸುವ ಕಾರ್ಯಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದರು.
ಜಿ.ಪಂ. ಉಪಾಧ್ಯಕ್ಷ ರಮೇಶ ಮುಂದಿನಮನಿ, ರೋಣ ತಾಪಂ ಅಧ್ಯಕ್ಷೆ ಲಲಿತಾ ಪೂಜಾರ, ಪುರಸಭೆ ಅಧ್ಯಕ್ಷೆ ದೇವಕ್ಕ ಬೆಳವಣಿಕಿ, ಉಪಾಧ್ಯಕ್ಷ ಭಾಸ್ಕರ ರಾಯಬಾಗಿ, ವಾಕರ ಗದಗ ವಿಭಾಗ ಅಧಿಕಾರಿ ಬಿ.ಎಸ್. ಗದ್ದಿಕೇರಿ, ವಾಕರ ಹುಬ್ಬಳ್ಳಿ ಕೇಂದ್ರ ಕಚೇರಿಯ ಅಭಿಯಂತರ ಟಿ.ಉಮಾಶಂಕರ, ಕಟ್ಟಿಮನಿ, ಸ್ಥಳೀಯ ಘಟಕ ವ್ಯವಸ್ಥಾಪಕ ಎಚ್.ಟಿ. ಬಳೂಟಗಿ, ಟಿ.ವಿ. ರಾಯಭಾಗಿ, ದುರುಗಪ್ಪ ಬಳೂಟಗಿ, ಅಂಬರೇಶ ಅರಳಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.