ಗ್ರಾಮೀಣ ಅಭಿವೃದ್ಧಿ ಯೋಜನೆ ಅನುಷ್ಠಾನಗೊಳ್ಳಲಿ: ಗುರಪ್ಪ ಆದಪ್ಪನವರ
ನರಗುಂದ: ರಾಜ್ಯದಲ್ಲಿ ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮತ್ತು ಜನತೆಗೆ ಹಲವಾರು ಯೋಜನೆ ಜಾರಿಗೆ ತಂದಿದೆ. ಆ ಯೋಜನೆಗಳು ಕಾರ್ಯರೂಪಕ್ಕೆ ಬಂದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ ಹೇಳಿದರು.
ಈಚೆಗೆ ಅವರು ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಬೆಂಗಳೂರು ಹಾಗೂ ವಾಹಿನ ಅಭಿವೃದ್ಧಿ ಸಂಸ್ಥೆ ಹೊಸಪೇಟಿ ಇವರ ಸಹಯೋಗದೊಂದಿಗೆ ಗ್ರಾಮೀಣ ಕುಡಿವ ನೀರು ಕುರಿತು ಗ್ರಾಪಂ ಮಟ್ಟದ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ ಗ್ರಾಮೀಣ ಭಾಗಗಳು ಅಭಿವೃದ್ಧಿಯಾಗಬೇಕೆಂದು ಸರ್ಕಾರ ಪ್ರತಿ ವರ್ಷ ಕೋಟ್ಯಂತರ ಹಣವನ್ನು ಗ್ರಾಮೀಣ ಭಾಗದ ಕುಡಿವ ನೀರು, ಚರಂಡಿ, ಮೂಲಭೂತ ಸೌಲಭ್ಯಗಳಿಗೆ ಖರ್ಚು ಮಾಡುತ್ತಿದೆ. ಇದರ ಸದುಪಯೋಗವಾದಲ್ಲಿ ಅಭಿವೃದ್ಧಿ ಸಾಧ್ಯ ಎಂದರು.
ಜಿ.ಆರ್. ಕದಂ, ಎಚ್.ಬಿ. ಗಣಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ರೇಣುಕಾ, ಪ್ರವೀಣ, ವಿನಾಯಕ, ಕಾಮಾಕ್ಷಿ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ರುದ್ರವ್ವ ಪೂಜಾರ, ಸದಸ್ಯ ಬಸವರಾಜ ಗಾಣಿಗೇರ, ವಿ.ಪಿ. ಶಾನವಾಡ, ನೀಲಪ್ಪ ಕಲ್ಲಾಪುರ, ರುದ್ರವ್ವ ಗೌಡಪ್ಪಗೌಡ್ರ, ರುದ್ರವ್ವ ಮುದಿನಗೌಡ್ರ, ನೀಲವ್ವ ಈಟಿ, ಶಾಂತವ್ವ ಮಾದರ, ಎಸ್.ಎಚ್. ಸುಂಕದ, ಎಂ.ಎ. ಮಹಾಂತೇಶ, ಎಸ್.ಎಸ್. ತೊಂಡಿಹಾಳ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

