ನಾಳೆ ಪಂಚಾಯತ್ ರಾಜ್ಯ ಸದಸ್ಯರ ಸಮಾವೇಶ
ರೋಣ: ರೋಣ ಮತಕ್ಷೇತ್ರ ರಾಜೀವಗಾಂಧಿ ಪಂಚಾಯತ್ ರಾಜ್ಯ ಸಂಘಟನೆಯ ಸದಸ್ಯರ ಬೃಹತ್ ಸಮಾವೇಶ ಪಟ್ಟಣದ ಆರ್.ಎಸ್. ಪಾಟೀಲ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಫೆ. 11ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ ಎಂದು ಮಾಜಿ ಶಾಸಕ ಜಿ.ಎಸ್. ಪಾಟೀಲ ಹೇಳಿದರು. ಅವರು ಶನಿವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶವನ್ನು ಕೇಂದ್ರದ ಮಾಜಿ ಸಚಿವ ಹಾಗೂ ಸಂಘಟನೆಯ ರಾಷ್ಟ್ರೀಯ ಸಂಚಾಲಕ ಮಣಿಶಂಕರ ಅಯ್ಯರ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಐ.ಎಸ್. ಪಾಟೀಲ ವಹಿಸುವರು. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕಾಂಗ್ರೆಸ್ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಪ್ರಚಾರ ಸಮಿತಿ ಉಪಾಧ್ಯಕ್ಷ ರಮೇಶಕುಮಾರ, ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿ ಡಾ. ಹನಮಂತಯ್ಯ, ಮಾಜಿ ಸಂಸದ ಆರ್.ಎಸ್. ಪಾಟೀಲ, ಸಂಘಟನೆಯ ರಾಜ್ಯ ಸಂಚಾಲಕ ಡಿ.ಆರ್.ಪಾಟೀಲ ಸೇರಿದಂತೆ ಮುಂತಾದವರು ಭಾಗವಹಿಸುವರು ಎಂದರು. ಇದೊಂದು ವಿಶೇಷ ಸಮಾವೇಶವಾಗಿದ್ದು, ಸಂಘಟನೆಯ ರೋಣ ಮತಕ್ಷೇತ್ರದ ಎಲ್ಲ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ಕಾಂಗ್ರೆಸ್, ಎಸ್.ಸಿ ಮತ್ತು ಎಸ್.ಟಿ., ಅಲ್ಪಸಂಖ್ಯಾತರ, ಮಹಿಳೆಯರು, ಸೇವಾದಳದ ಎಲ್ಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಾಗುವಂತೆ ಕೋರಿದರು. ಸುದ್ದಿಗೋಷ್ಠಿಯಲ್ಲಿ ರಾಜೀವಗಾಂಧಿ ಪಂ. ರಾ.ಸಂ ಜಿಲ್ಲಾ ಸಂಚಾಲಕ ಪ್ರಭು ಮೇಟಿ, ಹಾವೇರಿ ಲೋಕಸಭಾ ಮತಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಿಥುನ್ ಪಾಟೀಲ, ವಿ.ಬಿ. ಸೋಮನಕಟ್ಟಿಮಠ, ಪುರಸಭೆ ಅಧ್ಯಕ್ಷೆ ನೀಲವ್ವ ಮುಗಳಿ, ಬಸವರಾಜ ನವಲಗುಂದ, ಯೂಸುಫ ಇಟಗಿ, ಕೆ.ಕೆ.ಮುಲ್ಲಾ, ಯಮನವ್ವ ಜುಮ್ಮನಕಟ್ಟಿ, ಸಿದ್ದು ಪಾಟೀಲ, ಶರಣಪ್ಪ ಸಜ್ಜನ, ಡಾ. ಸಂಜಯ ರಡ್ಡೇರ, ಶರಣಪ್ಪ ಮಳಗಿ ಉಪಸ್ಥಿತರಿದ್ದರು.
ನೀರು ಪೂರೈಕೆ ಮಾಹಿತಿ
ಗದಗ: ನಗರದ ಜನತಾ ಕಾಲೋನಿ, ಅಂಬೇಡ್ಕರ್ ನಗರ, ಕುಂಬಾರಓಣಿ, ನರಿಬಾವಿಓಣಿ, ಪಲ್ಲೇದನವರ ಓಣಿ, ರೆಹಮತನಗರ, ಖಾನತೋಟ, ಕುಷ್ಠರೋಗ ಕಾಲೋನಿಗಳಲ್ಲಿ ಭಾನುವಾರ ತುಂಗಭದ್ರಾ ನದಿ ನೀರು ಪೂರೈಕೆ ಮಾಡಲಾಗುವುದು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

