ಮಕ್ಕಳ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಶಿವಬಸವ ಶ್ರೀ
ಕನ್ನಡಪ್ರಭ ವಾರ್ತೆ, ನರೇಗಲ್ಲ, ಫೆ. 10
ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ ಎಂದು ಶಿವಬಸವ ಶ್ರೀ ಹೇಳಿದರು.
ಅವರು ಭಾನುವಾರ ಸ್ಥಳೀಯ ಓಂ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಮಕ್ಕಳಿಗೆ ಚಿಕ್ಕಂದಿನಿಂದಲೇ ಕ್ರೀಡೆಯಲ್ಲಿ ತೊಡಗಿಸಿ, ಭಾರತೀಯ ಕ್ರೀಡೆಗಳಾದ ಖೋಖೋ, ಕಬಡ್ಡಿ, ಮಲ್ಲಕಂಬ, ರೋಪಮಲ್ಲಕಂಬ, ಜಂಪರೋಪ, ಅಟ್ಯಾ ಪಟ್ಯಾ ಹೀಗೆ ಮುಂತಾದ ಕ್ರೀಡೆಗಳನ್ನು ಕಲಿಸುವುದರಿಂದ ನಮ್ಮ ಭಾರತೀಯ ಮೂಲದ ಕ್ರೀಡೆ ಹಾಗೂ ಸಂಸ್ಕೃತಿ ಬೆಳೆಸಿದಂತಾಗುತ್ತದೆ. ಪಟ್ಟಣದಲ್ಲಿ 6 ತಿಂಗಳ ಹಿಂದೆಯಷ್ಟೇ ಪ್ರಾರಂಭವಾದ ಕ್ರೀಡಾ ಸಂಸ್ಥೆಯ ಅಡಿಯಲ್ಲಿ ಈಗಾಗಲೇ 19 ಮಕ್ಕಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಸಂಸ್ಥೆಯ ಕೀರ್ತಿ ಹೆಚ್ಚಿಸುವುದರ ಜತೆಗೆ ಹೊಸ ಕ್ರೀಡಾ ಪ್ರತಿಭೆಗಳಿಗೆ ಮಾದರಿಯಾಗಿದ್ದಾರೆಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ನರೇಗಲ್ಲನ ಸಂಪನ್ಮೂಲ ವ್ಯಕ್ತಿ ಕೆ.ಎಸ್. ಅಣಗೌಡ್ರ ಮಾತನಾಡಿ, ಮಕ್ಕಳು ದೈಹಿಕ, ಶಾರೀರಿಕ, ಮಾನಸಿಕ ಹಾಗೂ ಬೌದ್ಧಿಕವಾಗಿ ಬೆಳೆಯಲು ಕ್ರೀಡೆ ಸಹಕಾರಿಯಾಗಿದೆ. ಮಕ್ಕಳು ಆಸಕ್ತಿ ಹೊಂದಿದ ಆಟವಾಡುವುದರಿಂದ ಅವರಲ್ಲಿ ದೈಹಿಕ ಶಕ್ತಿ ಹೆಚ್ಚುವುದಲ್ಲದೇ ಕಲಿಕೆಯ ಆಸಕ್ತಿ ಹೆಚ್ಚಿಸುತ್ತದೆ ಎಂದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಅಶೋಕ ಬೇವಿನಕಟ್ಟಿ ವಹಿಸಿದ್ದರು. ಅತಿಥಿಗಳಾಗಿ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ಚನ್ನಬಸಪ್ಪ ಮ್ಯಾಗೇರಿ, ಶಿಕ್ಷಕಿಯರಾದ ನಮೃತಾ ಬಡಿಗಣ್ಣವರ, ಈರಮ್ಮ ಶಿಳ್ಳೀನ, ವಿಜಯಲಕ್ಷ್ಮೀ ನಿಟಾಲಿ, ಲಕ್ಷ್ಮೀ ಬಾರಕೇರ, ಜಯಶ್ರೀ ಕೆರಿಯವರ, ಶ್ವೇತಾ ಶಿರಸಂಗಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನರೇಗಲ್ಲ ಭಾಗದಿಂದ ರಾಷ್ಟ್ರ ಹಾಗೂ ಅಂತರ್ ರಾಷ್ಟ್ರೀಯಮಟ್ಟ, ವಿಶ್ವವಿದ್ಯಾಲಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಹಾಗೂ ರಾಜ್ಯ ಪ್ರಶಸ್ತಿ ವಿಜೇತರಿಗೆ ಹಾಗೂ ಕ್ರೀಡಾ ತರಬೇತುದಾರರನ್ನು ಸನ್ಮಾನಿಸಲಾಯಿತು. ಪಾರ್ವತಿಮಠ ಸ್ವಾಗತಿಸಿದರು. ಶಾಲೆಯ ಪ್ರಧಾನ ಗುರುಮಾತೆ ರೇಣುಕಾ ಕೀರ್ತಿಗೌಡರ ನಿರೂಪಿಸಿದರು. ಚಂದ್ರಕಲಾ ನರಗುಂದ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

