ಸತ್ಯಾಗ್ರಹಿ ರೈತರ ಬಂಧನ, ಕಲ್ಲು ತೂರಾಟ
ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಬಲ್ದೋಟಾ ಕಂಪನಿ ವಿರುದ್ಧ ಮಂಗಳವಾರ ಸತ್ಯಾಗ್ರಹ ನಿರತ ರೈತರನ್ನು ಪೊಲೀಸರು ಬಂಧಿಸಲು ಮುಂದಾದ ಸಂದರ್ಭದಲ್ಲಿ, ಕಲ್ಲು ತೂರಾಟ ನಡೆದಿದೆ.
ಅತ್ತಿಕಟ್ಟಿ ಗ್ರಾಮದಲ್ಲಿ ಬಲ್ದೋಟಾ ಕಂಪನಿ ಬಂಗಾರದ ಗಣಿಗಾರಿಕೆ ನಡೆಸಿ, ಬಂಗಾರ ಸಂಸ್ಕರಣಾ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ರೈತರಿಗೆ ತೀವ್ರ ವಂಚನೆ ಮಾಡುತ್ತಿದೆ ಎಂದು ಆರೋಪಿಸಿ, ಗ್ರಾಮಸ್ಥರು 5 ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಆದರೆ, ಮಂಗಳವಾರ ಮುಂಡರಗಿ ಪೊಲೀಸರು ಸ್ಥಳಕ್ಕಾಗಮಿಸಿ ರೈತರು ಹಾಗೂ ಹೋರಾಟಗಾರರನ್ನು ಬಂಧಿಸಲು ಮುಂದಾದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ಏನಿದು ವಿವಾದ?: ಅತ್ತಿಕಟ್ಟಿ ಗ್ರಾಮದಲ್ಲಿ ರಾಹುಲ್ ಬಲ್ದೋಟ ಒಡೆತನದ ರಾಮಗಡ ಮಿನರಲ್ಸ್ ಪ್ರೈ, ಲಿಮಿಟೆಡ್ ಕಂಪನಿ ಬಂಗಾರದ ಗಣಿ ಸಂಸ್ಕರಣಾ ಘಟಕವನ್ನು ಪ್ರಾರಂಭಿಸಲು 97 ಎಕರೆ ಭೂಮಿಯನ್ನು ಖರೀದಿಸಿತ್ತು. ಇಲ್ಲಿ ಸಸ್ಯತೋಟ ನಿರ್ಮಿಸುವುದಾಗಿ ಹೇಳಿ ಕಡಿಮೆ ಬೆಲೆಗೆ ಭೂಮಿ ಪಡೆದುಕೊಂಡಿದೆ. ಆದರೆ, ಈಗ ಗ್ರಾಮದಲ್ಲಿ ಬಂಗಾರ ಸಂಸ್ಕರಣೆ ಮಾಡುವ ಘಟಕ ಪ್ರಾರಂಭಿಸುತ್ತಿದ್ದು, ಇದನ್ನು ರೈತರು ತೀವ್ರವಾಗಿ ವಿರೋಧಿಸಿ, ನಮಗೆ ನ್ಯಾಯ ಒದಗಿಸಿ, ತಕ್ಷಣವೇ ನಮ್ಮ ಭೂಮಿ ಬಿಟ್ಟು ತೊಲಗಬೇಕೆಂದು ಕಂಪನಿಯ ಮುಖ್ಯ ದ್ವಾರದ ಬಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಜಿಲ್ಲಾ ಜಯ ಕರ್ನಾಟಕ ಸಂಘಟನೆ ಸದಸ್ಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

