ಗದಗ

17ರಂದು ಸಮ್ಮೇಳನ

Published On :

ಗದಗ: ಫೆ. 17ರಂದು ಚಿತ್ರದುರ್ಗದ ಮುರಗಾ ಮಠದ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 31ನೇ ರಾಜ್ಯಮಟ್ಟದ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಉದ್ಘಾಟಿಸುವರು. ಒಂದು ದಿನ ನಡೆವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಅಂಧ, ಶ್ರದ್ಧೆ ಹಾಗೂ ಸಾಮಾಜಿಕ ಆಂದೋಲನ, ಪ್ರಳಯ ಮತ್ತು ಮಾಧ್ಯಮದ ಹೊಣೆಗಾರಿಕೆ ವಿಷಯಗಳ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಪ್ರಸಕ್ತ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರು ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಯವರಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.