17ರಂದು ಅಬ್ಬಿಗೇರಿಗೆ ಕುಮಾರಸ್ವಾಮಿ
ಕನ್ನಡಪ್ರಭ ವಾರ್ತೆ, ರೋಣ, ಫೆ. 12
ತಾಲೂಕಿನ ಅಬ್ಬಿಗೇರಿಯಲ್ಲಿ ಫೆ. 17ರಂದು ಜೆಡಿಎಸ್ದಿಂದ ನಡೆಯಲಿರುವ ಗ್ರಾಮ ಸಂದರ್ಶನ ಬೃಹತ್ ಸಮಾರಂಭದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸುವರೆಂದು ರೋಣ ಮತಕ್ಷೇತ್ರದ ನಿಯೋಜಿತ ಜೆಡಿಎಸ್ ಅಭ್ಯರ್ಥಿ ಹೇಮಗಿರೀಶ ಹಾವಿನಾಳ ಹೇಳಿದರು.
ಅವರು ಭಾನುವಾರ ಸಂಜೆ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಾಲೂಕಿನ ಮ್ಯಾಕಲಝರಿಯಿಂದ ಪ್ರಾರಂಭವಾದ ಜೆಡಿಎಸ್ನ ಗ್ರಾಮ ಸಂದರ್ಶನ ಕಾರ್ಯಕ್ರಮವು ಫೆ. 24ರಂದು ರೋಣ ಪಟ್ಟಣದಲ್ಲಿ ಮುಕ್ತಾಯವಾಗುವುದು. ಫೆ. 17ರಂದು ಅಬ್ಬಿಗೇರಿಯಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ಎಚ್.ಡಿ. ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ಅನೇಕ ಮುಖಂಡರು ಭಾಗವಹಿಸುವರು.
ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಿದ್ದಾಗ ಮಾಡಿರುವ ಅನೇಕ ಸಾಧನೆಗಳು ಇಂದಿಗೂ ಸ್ತುತ್ಯಾರ್ಹವಾಗಿವೆ. ನಾಡಿನ ಸಮಗ್ರ ಅಭಿವೃದ್ಧಿಗಾಗಿ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾರೆ. ಗ್ರಾಮ ವಾಸ್ತವ್ಯ ಹಾಗೂ ಜನತಾ ದರ್ಶನ ಮೂಲಕ ಜನರ ಮನಸ್ಸಲ್ಲಿ ಉಳಿದಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಅಜ್ಜು ಬೇಪಾರಿ, ನಿಂಗಪ್ಪ ನವಲಗುಂದ, ಮೈಲಾರಪ್ಪ ದೇಶಣ್ಣವರ, ದೊಡ್ಡಬಸಪ್ಪ ನವಲಗುಂದ, ಮಹಾದೇವಪ್ಪ ನವಲಗುಂದ, ಸಂಗಪ್ಪ ನವಲಗುಂದ, ಪರಶುರಾಮ ಕಟ್ಟಿಮನಿ, ಶಾಂತೇಶ ಧರೆಣ್ಣೆಪ್ಪಗೌಡ್ರ, ಡಿ.ಎನ್. ಕಾತರಕಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

