ನಾಳೆ ಕೆಡಿಪಿ ಸಭೆ
ಗದಗ: ಫೆ. 16ರಂದು ಬೆಳ್ಳಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ದೇಶ್ವರ ಶ್ರೀ ಪ್ರವಚನ
ಗದಗ: ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಚನ್ನವೀರಶರಣರ ಮಠದಲ್ಲಿ ಜಾತ್ರಾಮಹೋತ್ಸವ ಮತ್ತು 18ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಸಿದ್ದೇಶ್ವರ ಮಹಾಸ್ವಾಮಿಗಳು ಜ್ಞಾನಯೋಗಾಶ್ರವು ಬಿಜಾಪುರ ಅವರ ಪ್ರವಚನ ಕಾರ್ಯಕ್ರಮವನ್ನು ಫೆ. 16ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ಹೊಳೆಆಲೂರ: ಇಲ್ಲಿನ ಸಂತ
ಸೇವಾಲಾಲ ಬಂಜಾರ ಸಮಾಜ ಸೇವಾ ಕಮಿಟಿ ವತಿಯಿಂದ ಸಂತ ಸೇವಾಲಾಲ ಮಹಾರಾಜರ 274ನೇ ಜಯಂತ್ಯುತ್ಸವ, ಕುಂಭಮೇಳ ಹಾಗೂ ಭಾವಚಿತ್ರ ಮೆರವಣಿಗೆ ಹಾಗೂ ಶ್ರೀ ಸಂತಸೇವಾಲಾಲ ಸಮುದಾಯ ಭವನದ ಅಡಿಗಲ್ಲು ಶಿಲಾನ್ಯಾಸ ಸಮಾರಂಭ ಫೆ.15ರಂದು ಆಯೋಜಿಸಲಾಗಿದೆ. ಬೆಳಗ್ಗೆ 8 ಗಂಟೆಗೆ ಕುಂಭಮೇಳ ಹಾಗೂ ಭಾವಚಿತ್ರ ಮೆರವಣಿಗೆಯು ಸೇವಾಲಾಲ ದೇವಸ್ಥಾನದಿಂದ ಡೊಳ್ಳು, ವಾದ್ಯ ಮೇಳಗಳೊಂದಿಗೆ ಹೊರಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಯಚ್ಚರಸ್ವಾಮಿ ಮಠಕ್ಕೆ ಆಗಮಿಸಿ ನೂತನ ಪಲ್ಲಕ್ಕಿಯನ್ನು ಯಚ್ಚರಸ್ವಾಮಿ ಮಠಕ್ಕೆ ಅರ್ಪಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ಆಯೋಜಿಸಲಾಗಿದೆ. ನಂತರ ರೇಲ್ವೆ ಸ್ಟೇಶನ್ ಹತ್ತಿರ ಇರುವ ಮಾರುತಿ ದೇವರ ಮಂದಿರ ಆವರಣದಲ್ಲಿ ನಡೆವ ಕಾರ್ಯಕ್ರಮದ ಸಾನ್ನಿಧ್ಯವನ್ನು ಯಚ್ಚರಸ್ವಾಮಿಗಳು ವಹಿಸಿಕೊಳ್ಳುವರು. ಶಿಲಾನ್ಯಾಸ ಹಾಗೂ ಸಮಾರಂಭವನ್ನು ನರಗುಂದ ಶಾಸಕ ಸಿ.ಸಿ. ಪಾಟೀಲ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಗದೀಶ ಬ್ಯಾಡಗಿ ವಹಿಸುವರು. ಅತಿಥಿಗಳಾಗಿ ಬಂಜಾರ ಕಲ್ಯಾಣ ಸಂಘದ ಜಿಲ್ಲಾ ಅಧ್ಯಕ್ಷ ರವಿಕಾಂತ ಅಂಗಡಿ, ಎ.ಎಸ್.ಬಳಗೋಡ, ಬಸವರಾಜ ಖವಾಸ್ತ ಆಗಮಿಸುವರು. ರಾತ್ರಿ 8 ಗಂಟೆಗೆ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

