ಅನ್ನದಾನೀಶ್ವರ ಶ್ರೀಗಳಿಗೆ ಸನ್ಮಾನ
ಕನ್ನಡಪ್ರಭ ವಾರ್ತೆ, ಗದಗ, ಫೆ. 15
ಕನ್ನಡ ನಾಡಿನ ಶ್ರೇಷ್ಠ ಸಾಹಿತಿ, ಧರ್ಮ ಚಿಂತಕರು, ಸಮಾಜ ಸುಧಾರಕರು ಹಾಗೂ ಶಿಕ್ಷಣ ಪ್ರೇಮಿಗಳಾದ ಮುಂಡರಗಿ ಅನ್ನದಾನೀಶ್ವರ ಮಠದ ಡಾ. ಅನ್ನದಾನೀಶ್ವರ ಶ್ರೀಗಳಿಗೆ ನಾಡೋಜ ಗೌರವ ದೊರೆತಿರುವುದು ಅವರ ಸಾಹಿತ್ಯ, ಕೃಷಿ ಕ್ಷೇತ್ರದಲ್ಲಿನ ಸಾಧನೆಗೆ ಸಂದ ಗೌರವವಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ಹೇಳಿದರು.
ಅವರು ಶ್ರೀಗಳಿಗೆ ನಾಡೋಜ ಘೋಷಣೆಯಾದ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿ ಶ್ರೀಗಳನ್ನು ಸನ್ಮಾನಿಸಿ ಮಾತನಾಡಿದರು. ಶ್ರೀಗಳು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಶೈಕ್ಷಣಿಕ, ಹಲವಾರು ರಂಗಗಳಲ್ಲಿ ಶ್ರೀಗಳ ಕೊಡುಗೆ ಅಪಾರವಾದದ್ದು. ಶ್ರೀಗಳಿಂದ ಇನ್ನೂ ಹೆಚ್ಚಿನ ಸೇವೆ ದೊರೆಯುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಪ್ರೊ. ಕೆ.ಎಚ್. ಬೇಲೂರ ಮುಂತಾದವರು ಮಾತನಾಡಿದರು. ಪ್ರಾ. ಎಸ್.ಬಿ. ಕರಿಭರಮಗೌಡರ, ಜಿಲ್ಲಾ ಕಸಾಪ ಸಲಹಾ ಮಂಡಳಿಯ ಸದಸ್ಯ ಪ್ರೊ. ಆರ್.ಎಲ್. ಪೊಲೀಸ್‌ಪಾಟೀಲ, ಗೌರವ ಕಾರ್ಯದರ್ಶಿ ಡಾ. ಸಂಗಮೇಶ ತಮ್ಮನಗೌಡ್ರ, ಶರಣು ಗೋಗೇರಿ, ಕೋಶಾಧ್ಯಕ್ಷ ಮಲ್ಲೇಶ ಡಿ.ಎಚ್, ಮುಂಡರಗಿ ತಾಲೂಕು ಕಸಾಪ ಅಧ್ಯಕ್ಷ ಎಸ್.ಬಿ. ಹಿರೇಮಠ, ಡಿ.ಎಸ್. ತಳವಾರ, ಪ್ರೊ. ನಾಗರಾಜ ಹಾವಿನಾಳ, ಪ್ರೊ. ಎ. ವೈ.ನವಲಗುಂದ, ಅಂದಪ್ಪ ಬೆಲ್ಲದ, ಡಂಬಳಮಠ ಹಾಗೂ ಕಸಾಪ ಪದಾಧಿಕಾರಿಗಳು, ಸಾಹಿತಿಗಳು, ಕಸಾಪ ಸದಸ್ಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

